ಹುಬ್ಬಳ್ಳಿ ಪೊಲೀಸರು ಇಬ್ಬರು ಗಲಭೆ ಆರೋಪಿಗಳನ್ನು ಬೆಂಗಳೂರಿನ ಕಾಟನ್ಪೇಟೆ ಹೊಟೆಲ್ನಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದರು. ಇವರ ಚಲನವಲನ ಕಂಡು ಹಿಂಬಾಲಿಸಿದ್ದ ಹುಬ್ಬಳ್ಳಿ ಪೊಲೀಸರು ಸ್ಥಳೀಯ ಪೊಲೀಸರೊಂದಿಗೆ ಸುತ್ತುವರೆದಿದ್ದರು.
ಆರೋಪಿಗಳು ಹಿಂದಕ್ಕೆ ತಿರುಗಿದಾಗ ಹೆಗಲ ಮೇಲೆ ಕೈ ಹಾಕಿ ಬಿಗಿಯಾಗಿ ಹಿಡಿದುಕೊಂಡರು.
ಹುಬ್ಬಳ್ಳಿಯಿಂದ ತಪ್ಪಿಸಿಕೊಂಡು ಹೊರಟಿದ್ದ ನಾಲ್ವರು ಹಾವೇರಿಯ ಬಂಕಾಪುರ ಬಸ್ಸ್ಟಾಪ್ನಲ್ಲಿ ಇಳಿದು, ಅಲ್ಲಿಂದ ಬೇರೆಡೆಗೆ ಪರಾರಿಯಾಗಿದ್ದರು.
ಇನ್ನಿಬ್ಬರು ಬೆಂಗಳೂರಿನತ್ತ ಪ್ರಯಾಣ ಮಾಡಿದ್ದರು. ರೌಡಿಶೀಟರ್ ಅಬ್ದುಲ್ ಮಲ್ಲಿಕ್ ಬೇಫಾರಿ ಹಾಗೂ ತುಫೇಲ್ ಮುಲ್ಲಾ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಬುಧವಾರ ಬೆಳಿಗ್ಗೆ ರಂಜಾನ್ಗೆಂದು ಬಟ್ಟೆ ಖರೀದಿ ಮಾಡಿದ್ದ ಆರೋಪಿಗಳು.
ಸಂಜೆಯ ನಂತರ ತವಕಲ್ ಮಸೀದಿ ಬಳಿ ಇದ್ದ ಲಾರ್ಡ್ನಲ್ಲಿ ಕೊಠಡಿ ಬುಕ್ ಮಾಡಿದ್ದರು. ಹೋಟೆಲ್ಗೆ ಊಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಅಷ್ಟರಲ್ಲಾಗಲೆ ಹುಬ್ಬಳ್ಳಿಯಿಂದ ಬಂದಿದ್ದ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಸ್ಥಳೀಯ ಡಿಸಿಪಿ ಸಂಜೀವ್ ಪಾಟೀಲ್ಗೆ ವಿವರ ನೀಡಿದ ಅವರು, ಸ್ಥಳೀಯ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸಿದರು.