ಚಿಂಚೋಳಿ: ಕುಂಚಾವರಂ ವನ್ಯಜೀವಿಧಾಮ ಅರಣ್ಯಪ್ರದೇಶ ವ್ಯಾಪ್ತಿಯ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಶವದ ರಹಸ್ಯ ಬಯಲಾಗಿದ್ದು, ಪ್ರಿಯಕರನ ಜತೆ ಸೇರಿಕೊಂಡು ಪತ್ನಿಯೇ ಪತಿಯನ್ನು ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.
ತೆಲಂಗಾಣ ರಾಜ್ಯದ ಘನಪುರ ಹತ್ತಿರದ ಮಲ್ಕಿಮೇನ ತಾಂಡಾದ ರವಿ ಪಿರ್ಯಾ ಪತ್ಲಾವತ್ (29) ಕೊಲೆಯಾದ ವ್ಯಕ್ತಿ.
ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ಪ್ರಿಯಕರ ಸುಮನ್ ಮಾನಯ್ಯ ತಲ್ಹಾರಿ ಮೊಗದಂಪುರ ಸೇರಿಕೊಂಡು ರವಿಯನ್ನು ದ್ವಿಚಕ್ರ ವಾಹನದಲ್ಲಿ ಕಾಡಿಗೆ ಕರೆದುಕೊಂಡು ಬಂದು ಕೊಲೆ ಮಾಡಿದ್ದರು ಎನ್ನಲಾಗಿದೆ.
2020ರ ಜನವರಿ 17ರಂದು ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಸಾಕಷ್ಟು ಶೋಧ ಕಾರ್ಯ ನಡೆಸಿದ ಬಳಿಕವೂ ಪೊಲೀಸರಿಗೆ ಮೃತ ವ್ಯಕ್ತಿಯ ಮಾಹಿತಿ ಸಿಕ್ಕಿರಲಿಲ್ಲ. ಕೆಲವು ತಿಂಗಳ ಬಳಿಕ ರವಿ ಕಾಣೆಯಾದ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಬೇಕೆಂದು ಅವರ ತಂದೆ ಸೊಸೆ ಲಕ್ಷ್ಮೀಗೆ ಕೇಳುತ್ತಲೇ ಇದ್ದರು. ಪದೇ ಪದೇ ಒತ್ತಡ ಹಾಕಿದಾಗ ಪತಿ ರವಿಯನ್ನು ನಾನು ಮತ್ತು ಸುಮನ್ ಸೇರಿ ಮೊಗದಂಪುರ ಅರಣ್ಯ ಪ್ರದೇಶದಲ್ಲಿ ಕೊಲೆ ಮಾಡಿದ್ದೇವೆ ಎಂದು ಆರೋಪಿ ಲಕ್ಷ್ಮೀ ಬಾಯಿ ಬಿಟ್ಟಿದ್ದಾರೆ.
Laxmi News 24×7