Breaking News

ರಥೋತ್ಸವ ಸಂದರ್ಭ ದುರಂತ; ಒಬ್ಬನ ಸಾವು, ಇಬ್ಬರಿಗೆ ಗಾಯ..

Spread the love

ಕಲಬುರಗಿ: ದೇವಸ್ಥಾನದಲ್ಲಿನ ರಥೋತ್ಸವ ಸಂದರ್ಭದಲ್ಲಿ ದುರಂತವೊಂದು ಸಂಭವಿಸಿದ್ದು, ಇದರಲ್ಲಿ ಒಬ್ಬ ಸಾವಿಗೀಡಾಗಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಈ ಅವಘಡ ಸಂಭವಿಸಿದೆ.

ಈ ದುರಂತದಲ್ಲಿ ಲಕ್ಷ್ಮೀಕಾಂತ್ ಕೆಸಬಳ್ಳಿ (25) ಎಂಬಾತ ಸಾವಿಗೀಡಾಗಿದ್ದು, ಭೀಮಾಶಂಕರ ಪೂಜಾರಿ ಮತ್ತು ಯಂಕಪ್ಪ ನೆಡಲ್​ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಲಬುರಗಿ ಜಿಲ್ಲೆಯ ಶಹಬಾದ್​ ತಾಲೂಕಿನ ರಾವೂರ ಗ್ರಾಮದ ಶ್ರೀಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದಲ್ಲಿ ಇಂದು ರಥೋತ್ಸವ ನಡೆಯಿತು. ಈ ಸಂದರ್ಭ ಚಲಿಸುತ್ತಿದ್ದ ರಥದ ಗಾಲಿಗೆ ಸಿಲುಕಿ ಲಕ್ಷ್ಮೀಕಾಂತ್ ಮೃತಪಟ್ಟಿದ್ದಾನೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ