Breaking News

ಮಾಸ್ಕ್ ಎಲ್ಲಿ ಇಟ್ಟೀರಿ ಹುಡಕ್ಯಾಡರಿ ಇಂದಿಂದ ಮತ್ತ ಮಾಸ್ಕ್ ಹಾಕೊಬೇಕು: ರಾಜ್ಯ ಸರ್ಕಾರ

Spread the love

ಕೋವಿಡ್‌ ನಾಲ್ಕನೇ ಅಲೆಯ ಬಗ್ಗೆ ಚರ್ಚೆಯಾಗುತ್ತಿರುವುದು ಹಾಗೂ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿರುವ ಕಾರಣ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸೋಮವಾರ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಜಾಗಗಳಲ್ಲಿ ಹಾಗೂ ಸಂಚಾರದ ವೇಳೆ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಿದ್ದು, ಅಂಥ ಕ್ರಿಯೆ ಕಂಡು ಬಂದರೆ ದಂಡ ಹಾಕಲು ಸೂಚಿಸಲಾಗಿದೆ. ಹಾಗೇ ಜನರು ಸಾರ್ವಜನಿಕ ಸ್ಥಳಗಳಲ್ಲಿ ಪರಸ್ಪರ ಕನಿಷ್ಠ 2 ಅಡಿ ಅಂತರ ಕಾಯ್ದುಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

2022ರ ಫೆಬ್ರುವರಿ 28ರಿಂದ ರಾಜ್ಯದಲ್ಲಿ ಕೋವಿಡ್‌-19 ನಿರ್ಬಂಧಗಳನ್ನು ತೆಗೆದು ಹಾಕಲಾಗಿದ್ದು, ಎಲ್ಲ ಕಾರ್ಯಕ್ರಮಗಳು ತೊಡಕಿಲ್ಲದೆ ನಡೆಯುತ್ತಿವೆ. ಈಗ ದೆಹಲಿ, ಹರಿಯಾಣ ಹಾಗೂ ತಮಿಳುನಾಡಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕರ್ನಾಟಕದಲ್ಲೂ ನಿತ್ಯ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ ಏರಿಕೆ ಕಂಡು ಬಂದಿರುವುದಾಗಿ ಸರ್ಕಾರ ಹೇಳಿದೆ.


Spread the love

About Laxminews 24x7

Check Also

ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!!

Spread the love ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!! ನಿರಂತರ ಮಳೆಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ