Breaking News

ಗೋವಾ : ಅಕ್ರಮ ಚಿನ್ನ ಸಾಗಾಟ ಐವರ ಬಂಧನ

Spread the love

ಪಣಜಿ: ಆದಾಯ ಗುಪ್ತಚರ ನಿರ್ದೇಶನಾಲಯದ ಗೋವಾ ವಿಭಾಗದ ಅಧಿಕಾರಿಗಳು ಗೋವಾ ದಾಬೋಲಿಂ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕರಿಂದ 2.13 ಕೋಟಿ ರೂ ಮೌಲ್ಯದ ಕಾಂಬೊಡ್ರೋನ್, ಚಿನ್ನ, ಅಮೆರಿಕನ್ ತಂಬಾಕು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಈ ಪ್ರಕರಣದಲ್ಲಿ ಐವರನ್ನು ಬಂಧಿಸಿದ್ದಾರೆ.

ಏರ್ ಅರೇಬಿಯಾ ಜಿ-9492 ವಿಮಾನದಲ್ಲಿ ಗೋವಾಕ್ಕೆ ಬಂದಿಳಿದಿದ್ದರು. ಈ ವೇಳೆ ಡಿಆರ್ ಐ ತಂಡವು ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಿದಾಗ ವಿವಿಧ ವಸ್ತುಗಳನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ.

ವಾಸಿದ್ ಅಲಿಖಾನ್, ಜುನೆದುಲ್ ಹಕ್, ಜುನೆತ್ ಅಫಜಲ್ ಶೇಖ್, ಮೊಹಮ್ಮದ್ ಆಯುಬ್, ಮೊಹಸಿನ್ ರಾಜಾ ಎಂಬ ಆರೋಪಿಗಳನ್ನು ಅಧಿಕಾರಿಗಳು ಬಂಧಿಸಿದ್ದಾರೆ.


Spread the love

About Laxminews 24x7

Check Also

ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

Spread the loveಬೀದರ್: ಕಾರು ಹಾಗೂ ಗೂಡ್ಸ್ ವಾಹನದ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ