Breaking News

ಹುಬ್ಬಳ್ಳಿ : 144 ಸೆಕ್ಷನ್ ಹಿಂಪಡೆದ ಪೊಲೀಸರು

Spread the love

ಹುಬ್ಬಳ್ಳಿ: ಏಪ್ರಿಲ್ 16 ರಂದು ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಾಭೆ ಸಂಬಂಧ, ಜಾರಿಗೊಳಸಲಾಗಿದ್ದ ನಿಷೇಧಾಜ್ಞೆಯನ್ನು ಹಿಂಪಡಿಯಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್​ ಅವರು ತಿಳಿಸಿದ್ದಾರೆ.

ಗಲಭೆ ಹಿನ್ನೆಲೆಯಲ್ಲಿ ನಗರದ ದಕ್ಷಿಣ ಉಪ ವಿಭಾಗ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿದ್ದರು.

ಸದ್ಯ ಪರಿಸ್ಥಿತಿ ಶಾಂತವಾದ ಹಿನ್ನೆಲೆ ಕಲಂ 144 ಸೆಕ್ಷನ್​​ನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ.

ಗಲಭೆ ನಡೆದ ರಾತ್ರಿಯಿಂದಲೇ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಬಳಿಕ ಏ.20 ರಿಂದ 23ರ ಬೆಳಗ್ಗೆ 6 ಗಂಟೆವರೆಗೆ ದಕ್ಷಿಣ ಉಪ ವಿಭಾಗದಲ್ಲಿ ನಿಷೇಧಾಜ್ಞೆ ಮುಂದುವರಿಸಿದ್ದರು. ಇದೀಗ ಪರಿಸ್ಥಿತಿ ಹತೋಟಿಗೆ ಬಂದ ಹಿನ್ನೆಲೆ ಎಲ್ಲೆಡೆ ನಿಷೇಧಾಜ್ಞೆ ಕೈಬಿಟ್ಟಿದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ