Breaking News

ಕಾಲುವೆಗೆ ಈಜಲು ಹೋದ ಬಾಲಕಿಯರು ನೀರುಪಾಲು

Spread the love

ರಾಯಚೂರು: ತಾಲೂಕಿನ ಮಿರ್ಜಾಪುರ ಗ್ರಾಮದ ಬಳಿ ರಾಜಲಬಂಡಾ ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ.

ಇಂದೂ(14) ಮತ್ತು ಸುಜಾತ(13) ಮೃತ ದುರ್ದೈವಿಗಳು. ಕಾಲುವೆಯಲ್ಲಿ ನೀರು ಕಡಿಮೆ ಇದೇ ಎಂದು ತಿಳಿದು ನಾಲ್ಕು ಬಾಲಕಿಯರು ನೀರಿಗೆ ಇಳಿದಿದ್ದರು. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಈಜು ಬಾರದ ಹಿನ್ನೆಲೆ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಬಾಲಕಿಯರು ಈಜಿ ದಡ ಸೇರಿದ್ದಾರೆ.

ಬೇಸಿಗೆ ಹಿನ್ನೆಲೆ ಬಾಲಕಿಯರು ಈಜಾಡಲು ಹೋಗಿ ಮೃತಪಟ್ಟಿದ್ದಾರೆ. ಇದೀಗ ಮೃತ ದೇಹಗಳನ್ನು ಗ್ರಾಮಸ್ಥರು ಹೊರತೆಗೆದಿದ್ದಾರೆ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ