ಗದಗ : ಮೂರು ಸಾವಿರ ಮಠದ ಪಿಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು ಎಂಬ ಸಚಿವ ಸಿ.ಸಿ.ಪಾಟೀಲ್ ಆರೋಪವನ್ನು ಸಾಬೀತು ಮಾಡಬೇಕು ಎಂದು ಆಗ್ರಹಿಸಿ ಇಂದು ದಿಂಗಾಲೇಶ್ವರ ಸ್ವಾಮೀಜಿ ಧರಣಿ ನಡೆಸಲಿದ್ದಾರೆ.
ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿರುವ ಸಚಿವ ಸಿ.ಸಿ.ಪಾಟೀಲ್ ಮನೆ ಮುಂದೆ ದಿಂಗಾಲೇಶ್ವರ ಸ್ವಾಮಿಜಿ ಧರಣಿ ನಡೆಸಲಿದ್ದಾರೆ.
ತಮ್ಮ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾಡಿರುವ ಆರೋಪಗಳ ಬಗ್ಗೆ ಏಪ್ರಿಲ್ 27 ರೊಳಗೆ ವಿವರಣೆ ನೀಡಬೇಕು ಎಂದು ದಿಂಗಾಲೇಶ್ವರ ಶ್ರೀಗಳು ಆಗ್ರಹಿಸಿದ್ದರು. ಗಡುವು ಮುಕ್ತಾಯವಾದ ಹಿನ್ನೆಲೆಯಲ್ಲಿ ಸ್ವಾಮೀಜಿ ಇಂದು ಸಚಿವರ ವಿರುದ್ಧ ಧರಣಿ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಿ.ಸಿ.ಪಾಟೀಲ್, ಮೂರು ಸಾವಿರ ಮಠದ ಪೀಠಾಧಿಪತಿಯಾಗಲು ದಿಂಗಾಲೇಶ್ವರ ಸ್ವಾಮೀಜಿ ರೌಡಿಸಂ ಮಾಡಿದ್ದರು. ಅವರ ಪೂರ್ವಶ್ರಮದ ಬಗ್ಗೆ ನನಗೆ ಗೊತ್ತಿದೆ ಎಂದು ಆರೋಪ ಮಾಡಿದ್ದರು.