Breaking News

ಸದ್ಯಕ್ಕೆ ಟಫ್ ರೂಲ್ಸ್ ಜಾರಿಯಿಲ್ಲ: ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಕೊರೊನಾ 4ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಪ್ರಧಾನಿ ಮೋದಿ ಅವರೊಂದು ತುರ್ತು ಸಭೆ ಮುಕ್ತಾಯದ ಬಳಿಕ ಮಾತನಾಡಿದ ಅವರು, ಸದ್ಯಕ್ಕೆ ರಾಜ್ಯದಲ್ಲಿ ಸಾಫ್ಟ್ ರೂಲ್ಸ್ ಮಾತ್ರ ಜಾರಿ ಮಾಡುತ್ತೇವೆ. ಸ್ವಲ್ಪ ದಿನ ಕಾದು ನೋಡುವ ಬಗ್ಗೆ ಚಿಂತನೆ ನಡೆಸಿದ್ದೇವೆ. ಕೇಂದ್ರದಿಂದ ಯಾವುದೇ ನಿಯಮ ಜಾರಿಗೆ ಸೂಚನೆ ಬಾರದ ಹಿನ್ನಲೆ ಸದ್ಯಕ್ಕೆ ಕಠಿಣ ನಿಯಮ ಜಾರಿ ಮಾಡದೇ ಇರಲು ನಿರ್ಧಾರ ಮಾಡಿದ್ದೇವೆ ಎಂದರು.ಧಾನಿಗಳ 3ಟಿ ಸೂತ್ರ ಅಳವಡಿಕೆಗೆ ನಿರ್ಧರಿಸಿದ್ದು, ರಾಜ್ಯದಲ್ಲಿ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್‍ಮೆಂಟ್ ಸೂತ್ರ ಅನುಷ್ಠಾನ ಆಗಲಿದೆ. ಇದರ ಜೊತೆಗೆ ಲಸಿಕೆ ಅಭಿಯಾನ ಚುರುಕು ಮಾಡುತ್ತೇವೆ. ಹಾಗೆಯೇ ಮಕ್ಕಳ ಲಸಿಕೆ ಅಭಿಯಾನಕ್ಕೆ ವೇಗ ಕೊಡಲು ನಿರ್ಧಾರ ಮಾಡಿದ್ದೇವೆ. 6 ರಿಂದ 12 ಮತ್ತು 15 ರಿಂದ 18 ಮತ್ತು 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ ವೇಗ ಹೆಚ್ಚಳ ಮಾಡಿತ್ತೇವೆ ಎಂದು ಹೇಳಿದರು. 


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ