Breaking News

ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರ ಆದೇಶ

Spread the love

ತಿರುವನಂತಪುರಂ: ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸಭೆ ಬೆನ್ನಲ್ಲೆ ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಕೆಲಸದ ಸ್ಥಳಗಳಲ್ಲೂ, ಪ್ರಯಾಣದ ವೇಳೆಯೂ ಮಾಸ್ಕ್ ಧರಿಸಲು ಸೂಚನೆ ನೀಡಲಾಗಿದೆ. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಬೇಕೆಂದು ಇದೇ ವೇಳೆ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಮೂಲಕ ಕೊವೀಡ್ ನಿಯಮ ಉಲ್ಲಂಘನೆ ಶಿಕ್ಷಾರ್ಹ ಅಪರಾಧ ಎಂದು ಕೇರಳ ಸರ್ಕಾರ ಎಚ್ಚರಿಕೆ ನೀಡಿದೆ.

 

ಕೋವಿಡ್ 4 ನೇ ಅಲೆ ವ್ಯಾಪಕಗೊಳ್ಳಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ಪೊಲೀಸರು ಮಾಸ್ಕ್ ಧರಿಸದವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ