Breaking News
Home / ಜಿಲ್ಲೆ / ಬೆಳಗಾವಿ ಹೆಲ್ತ್ ಬುಲೆಟಿನ್ ಸಂಪೂರ್ಣವಾಗಿ…

ಬೆಳಗಾವಿ ಹೆಲ್ತ್ ಬುಲೆಟಿನ್ ಸಂಪೂರ್ಣವಾಗಿ…

Spread the love

ಬೆಳಗಾವಿ ಜಿಲ್ಲೆ: ಮತ್ತೇ ಆರು ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಒಟ್ಟು ಸಂಖ್ಯೆ 51 ಕ್ಕೆ ಏರಿಕೆ

ಬೆಳಗಾವಿ, ಏ.25(ಕರ್ನಾಟಕ ವಾರ್ತೆ): ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ(ಏ.25) ಮತ್ತೇ ಆರು ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಈ ಹೊಸ ಆರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 51 ಕ್ಕೆ ಏರಿದಂತಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದಿನ(ಏ.25) ಬೆಳಿಗ್ಗೆಯ ಪತ್ರಿಕಾ ಪ್ರಕಟಣೆಯ ಪ್ರಕಾರ ಬೆಳಗಾವಿಯಲ್ಲಿ 6 ಪ್ರಕರಣಗಳು ದೃಢಪಟ್ಟಿರುತ್ತವೆ.

ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 45 ವರ್ಷದ ಪುರುಷ ಪಿ-482;
38 ವರ್ಷದ ಪುರುಷ ಪಿ-483; ಮತ್ತು
80 ವರ್ಷದ ಪಿ-484; 55 ವರ್ಷದ 485; 42 ವರ್ಷದ ಪಿ-486 ಹಾಗೂ 39 ವರ್ಷದ ಪಿ-487 ನಾಲ್ವರು ಮಹಿಳೆಯರಿಗೆ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.
ಈ ಇಬ್ಬರು ಪುರುಷರು ಮತ್ತು ನಾಲ್ವರು ಮಹಿಳೆಯರು ಪಿ-128 ಸೋಂಕಿತನ ಜತೆ ದ್ವಿತೀಯ ಸಂಪರ್ಕಕ್ಕೆ ಬಂದಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 51 ಜನರಲ್ಲಿ ಸೋಂಕು ಕಂಡುಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಈ ಪೈಕಿ ಗುಣಮುಖರಾಗಿರುವ ನಾಲ್ಕು ಜನರನ್ನು ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿರುತ್ತದೆ.
****


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ