Breaking News

ಹುಬ್ಬಳ್ಳಿ ಗಲಭೆ ಕೇಸ್ : ಮತ್ತೆ 8 ಆರೋಪಿಗಳು ಅರೆಸ್ಟ್

Spread the love

ಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ 8 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ.

 

ಗಲಭೆ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ನೀಡಿರುವ ಸುಳಿವಿನ ಮೇರೆಗೆ ತಲೆಮರೆಸಿಕೊಂಡಿದ್ದ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ಕೈಗೊಂಡಿದ್ದಾರೆ.

 

ಪೊಲೀಸ್ ವಶದಲ್ಲಿದ್ದ ಗಲಭೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ವಸೀಂ ಪಠಾಣ್‍ನನ್ನು ಗೌಪ್ಯ ಸ್ಥಳಕ್ಕೆ ಕರೆದೊಯ್ದು ತೀವ್ರ ವಿಚಾರಣೆ ನಡೆಸಲಾಗುತ್ತಿದ್ದು, ಆರೋಪಿಗಳಾದ ನಾಸೀರ್ ಅಹಮ್ಮದ್ ಹೊನ್ಯಾಳ, ಆರೀಫ್ ರನ್ನು ವಿಚಾರಣೆಗೆ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ