Breaking News

ಪೈಲೆಟ್‍ನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು ಸಚಿವರು

Spread the love

ಬೆಂಗಳೂರು,ಏ.28- ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಸಚಿವರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ
ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಎಂ.ಟಿ.ಬಿ.ನಾಗರಾಜ್ ಮತ್ತು ಮುರುಗೇಶ್ ನಿರಾಣಿ ಅವರು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಬೇಕಿದ್ದ ಉದ್ಯಮಿಯಾಗು -ಉದ್ಯೋಗ ನೀಡು ಮತ್ತು ಕೈಗಾರಿಕಾ ಅದಾಲತ್ ಕಾರ್ಯಕ್ರಮದಲ್ಲಿ ತೆರಳಬೇಕಿತ್ತು.

ಬೆಳಗ್ಗೆ 7 ಗಂಟೆಗೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಖಾಸಗಿ ಕಂಪನಿಗೆ ಸೇರಿದ ಹೆಲಿಕಾಪ್ಟರ್‍ನ್ನು ಬುಕ್ ಮಾಡಲಾಯಿತು. ನಿಗದಿತ ಸಮಯಕ್ಕೆ ಸರಿಯಾಗಿ ಇಬ್ಬರು ಸಚಿವರು ಎಚ್‍ಎಎಲ್‍ಗೆ ಬಂದರು. ಇನ್ನೇನು ಹೆಲಿಕಾಪ್ಟರ್ ಹೊರಡಬೇಕು ಎನ್ನುವಷ್ಟರಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ತಕ್ಷಣವೇ ಪೈಲೆಟ್‍ಎಚ್ಚೆತ್ತುಕೊಂಡು ಹೆಲಿಕಾಪ್ಟರ್‍ನ್ನು ಹಾರಿಸಲಿಲ್ಲ.

ತಾಂತ್ರಿಕ ದೋಷ ಇರುವುದರಿಂದ ಹಾರಾಟ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಬೇರೆ ಹೆಲಿಕಾಪ್ಟರ್ ನೋಡಿಕೊಳ್ಳುವಂತೆ ಪೈಲೆಟ್ ಸಲಹೆ ಮಾಡಿದ. ಕೊನೆಗೆ ಇಬ್ಬರು ಸಚಿವರು ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಿದರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ