Breaking News
Home / ರಾಜಕೀಯ / PSI ನೇಮಕಾತಿ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

PSI ನೇಮಕಾತಿ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

Spread the love

ಬೆಳಗಾವಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಇಂದು ಸಿಐಡಿ ಎಸ್‌ಪಿ. ರಾಘವೇಂದ್ರ ಹೆಗಡೆ, ಡಿವೈಎಸ್‍ಪಿ, ಪ್ರಕಾಶ್ ರಾಠೋಡ್, ಡಿವೈಎಸ್‍ಪಿ ಶಂಕರಗೌಡ ನೇತೃತ್ವದ ತಂಡದಿಂದ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು ಬಂಧಿಸಲಾಗಿದೆ.

ಇದೇ ವೇಳೆ ಮತ್ತೋರ್ವ ಆರೋಪಿಯಾಗಿದ್ದ ಪರೀಕ್ಷಾ ಕೇಂದ್ರದ ಮೇಲ್ವಿಚಾರಕಿ ಹಾಗೂ ಶಿಕ್ಷಕಿ ಅರ್ಚನಾರನ್ನು ಸಹ ಅಧಿಕಾರಿಗಳು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪುಣೆಯ ಹೋಟೆಲ್‍ವೊಂದರಲ್ಲಿ ತಂಗಿದ್ದರು. ಸದ್ಯ ಅಧಿಕಾರಿಗಳು ದಿವ್ಯಾ ಹಾಗರಗಿಯನ್ನು ಪುಣೆಯಿಂದ ಕಲಬುರಗಿಗೆ ಕರೆತರುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನೂ ಐವರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರನ್ನು ವಿಚಾರಣೆ ನಡೆಸಿ ಅಕ್ರಮದಲ್ಲಿ ಭಾಗಿಯಾಗಿದ್ದರೆ, ಅರೆಸ್ಟ್‌ ಮಾಡಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ


Spread the love

About Laxminews 24x7

Check Also

ಮೂಡಲಗಿ | ಕಾರು ಡಿಕ್ಕಿ: ಬಾಲಕ ಸಾವು

Spread the love ಮೂಡಲಗಿ: ತಾಲ್ಲೂಕಿನ ನಾಗನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮೀಪ ಸೋಮವಾರ ಮೂಡಲಗಿ- ಗೋಕಾಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ