Breaking News

ರಾಯಚೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಸಹಿತ ಮಳೆ- ಧರೆಗುರುಳಿದ ಬೃಹತ್ ಮರ

Spread the love

ರಾಯಚೂರು: ಬಿಸಿಲನಾಡು ರಾಯಚೂರಿನಲ್ಲಿ ಸುರಿದ ಆಲಿಕಲ್ಲು ಸಹಿತ ಮಳೆಯಿಂದ ಬಿಸಿಲಿಗೆ ತತ್ತರಿಸಿರುವ ಜಿಲ್ಲೆ ತಂಪಾಗಿದ್ದರು, ಬೆಳೆ ಕಟಾವು ಮಾಡಿದ್ದ ರೈತರು ಕಂಗಾಲಾಗಿದ್ದಾರೆ.ಜಿಲ್ಲೆಯ ಲಿಂಗಸುಗೂರು, ಹಟ್ಟಿ, ಮುದಗಲ್ ಸೇರಿದಂತೆ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗಿದೆ.

ಲಿಂಗಸುಗೂರು ತಾಲೂಕಿನ ಆಮದಿಹಾಳ ಗ್ರಾಮದ ಬಳಿಯ ರಾಯಚೂರು-ಬೆಳಗಾವಿ ಹೆದ್ದಾರಿಯಲ್ಲಿ ಬೃಹತ್ ಮರ ಧರೆಗುರುಳಿದೆ. ಗಾಳಿ ಸಹಿತ ಮಳೆ ಜೋರಾಗಿದ್ದರಿಂದ ಬೃಹತ್ ಮರ ಧರೆಗುರುಳಿದೆ.

ಮರ ರಸ್ತೆಗೆ ಉರುಳಿ ಬಿದ್ದಿದ್ದರಿಂದ ವಾಹನಗಳ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನೂ ಹಟ್ಟಿ ಪಟ್ಟಣದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆ ಸುರಿದಿದ್ದರಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ದಿಢೀರ್ ಮಳೆಯಿಂದ ಭತ್ತ ಕಟಾವು ಮಾಡಿದ್ದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ