Breaking News

ದ್ವೇಷ ಭಾಷಣ’ಗಳ ಕಡಿವಾಣಕ್ಕೆ ಸುಪ್ರೀಂ ಸೂಚನೆಯಂತೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

Spread the love

ಹುಬ್ಬಳ್ಳಿ(ಧಾರವಾಡ): ಇತ್ತೀಚಿನ ದಿನಗಳಲ್ಲಿ ರಾಜ್ಯ ಅಲ್ಲದೇ ದೇಶದಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿವೆ.‌ ಹೀಗಾಗಿ ಸುಪ್ರೀಂಕೋರ್ಟ್ ಸೂಚನೆಯಂತೆ ದ್ವೇಷ ಭಾಷಣಗಳ ಕಡಿವಾಣಕ್ಕೆ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗುರುವಾರದಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಸುಪ್ರೀಂಕೋರ್ಟ್ ಆದೇಶವನ್ನು ಪಾಲಿಸಲಾಗುವುದು. ರಾಜ್ಯ ಅಲ್ಲದೇ ದೇಶದಾದ್ಯಂತ ದ್ವೇಷ ಭಾಷಣ ಹೆಚ್ಚಿದೆ. ಸಾಮಾಜಿಕ ‌ಜಾಲತಾಣಗಳಲ್ಲಿ ಇದು‌ ಇನ್ನೂ ಹೆಚ್ಚಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸ್ಥಾಯಿಕ ವ್ಯವಸ್ಥೆ ‌ಕುರಿತು ಚರ್ಚಿಸಲು ಏ.30 ರಂದು ದೆಹಲಿಯಲ್ಲಿ ಸಮ್ಮೇಳನ ಆಯೋಜಿಸಲಾಗಿದೆ‌.‌ ಶುಕ್ರವಾರ(ಇಂದು) ದೆಹಲಿಗೆ ತೆರಳುತ್ತಿದ್ದೇನೆ ಎಂದು ಇದೇ ವೇಳೆ ಹೇಳಿದರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ