ಬೆಳಗಾವಿ: ದೇಶದಲ್ಲಿ ಬಿಜೆಪಿಯರು ಹಿಂದುತ್ವವನ್ನು ಲೀಸ್‍ಗೆ ಪಡೆದಿದ್ದಾರಾ ಎಂದು ಸಂಸದ ಪ್ರತಾಪ್ ಸಿಂಹಗೆ ಯೂಥ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರ್ಖ ಜನ ವಿರೋಧಿ ಬಿಜೆಪಿ ಸರ್ಕಾರಕ್ಕೆ 40% ಕಮಿಷನ್ ಬಿಟ್ಟು ಬೇರೆ ಎನೂ ಕಾಣಿಸುತ್ತಿಲ್ಲ. ಕಳೆದ ಏಳು ವರ್ಷದಿಂದ ಪೆಟ್ರೋಲ್, ಡೀಸೆಲ್ ದರ ಡಬಲ್ ಆಗಿದೆ. ಸಾಮಾನ್ಯ ಒಬ್ಬ ವ್ಯಕ್ತಿ ಮನೆಯಿಂದ ಆಚೆ ಬರಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಪ್ರತಾಪ್ ಸಿಂಹ ಅವರು ಹೇಳ್ತಾರೆ ಕಾಂಗ್ರೆಸ್‍ನಲ್ಲಿ ಬಣ ಇದೆ ಅಂತಾ. ಆದರೆ ಕಾಂಗ್ರೆಸ್ ನಲ್ಲಿ ಇರೋದು ಒಂದೇ ಬಣ. ಅದು ಕಾಂಗ್ರೆಸ್ ಬಣ ಎಂದರು. ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ಯಾವ ಧರ್ಮಕ್ಕೆ ಸೇರಿದವರು. ನಾವೇನೂ ಇಂತಹದ್ದೇ ಜಾತಿಯಲ್ಲಿ ಹುಟ್ಟಬೇಕು ಅಂತಾ ಅರ್ಜಿ ಹಾಕಿ ಹುಟ್ಟಿದ್ದೇವಾ..? ಬಿಜೆಪಿಯರು ಹಿಂದುತ್ವವನ್ನು ಲೀಸ್‍ಗೆ ಪಡೆದಿದ್ದಾರಾ ಎಂದು ಸಂಸದ ಪ್ರತಾಪ್ ಸಿಂಹಗೆ ನಲಪಾಡ್ ತಿರುಗೇಟು ನೀಡಿದ್ದಾರೆ.
Laxmi News 24×7