Breaking News

ರಾಜ್ಯದಾದ್ಯಂತ ಮೇ.16ರಿಂದ ಶಾಲೆ ಪ್ರಾರಂಭ,

Spread the love

ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿನ ಕಲಿಕಾ ಕೊರತೆಯನ್ನು ಸರಿದೂಗಿಸೋ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

 

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ವೇಳಾಪಟ್ಟಿಯಂತೆ ಪ್ರಸಕ್ತ ವರ್ಷವನ್ನು ಕಲಿಕಾ ಚೇತರಿಕೆ ವರ್ಷವೆಂದು ಸಂಕಲ್ಪಿಸಲಾಗಿದ್ದು, ವಾರ್ಷಿಕ ಪಠ್ಯವಸ್ತು ಬೋಧನೆಯನ್ನು ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಸಂಯೋಜಿಸಿ, ವಾರ್ಷಿಕ ಕಾರ್ಯಸೂಚಿಯನ್ನು ತಯಾರಿಸಲಾಗಿದೆ ಎಂದು ತಿಳಿಸಿದೆ.

2022-23ನೇ ಶೈಕ್ಷಣಿಕ ವೇಳಾಪಟ್ಟಿಯಂತೆ ದಿನಾಂಕ 14-05-2022ರಿಂದ ಶಾಲೆ ಪ್ರಾರಂಭ ಮತ್ತು ಪ್ರಾರಂಭೋತ್ಸವದ ಪೂರ್ವ ಸಿದ್ಧತೆ ಆರಂಭಗೊಳ್ಳಲಿದೆ. ದಿನಾಂಕ 16-05-2022ರಿಂದ ಶಾಲಾ ಪ್ರಾರಂಭೋತ್ಸವ ಶುರುವಾಗಲಿದೆ. ಅಲ್ಲದೇ ದಿನಾಂಕ 03-10-2022 ರಿಂದ ದಿನಾಂಕ 16-10-2022ರವರೆಗೆ ದಸರಾ ರಜೆಯನ್ನು ಘೋಷಿಸಲಾಗಿದೆ.

ಹೀಗಿದೆ.. 2022-23ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕಾರ್ಯಸೂಚಿ ಪಟ್ಟಿ

                      

Dailyhunt

Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ