Breaking News

ಕುಡಿದು ಬಂದ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿ ಅಪ್ರಾಪ್ತ ಬಾಲಕ..!

Spread the love

ಧಾರವಾಡ : ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಪುಂಡಲೀಕ (43) ಎಂದು ಗುರುತಿಸಲಾಗಿದೆ. ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತಿದ್ದ ತಂದೆ ಯಿಂದ ರೋಸಿ ಹೋಗಿದ್ದ ಮಗ, ಕೊನೆಗೆ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.

ಬಾಲಕ ಇನ್ನೂ 17 ವರ್ಷದವನಾಗಿದ್ದು, ತಂದೆಯ ಜೊತೆ ಕಳೆದ ನಾಲ್ಕು ದಿನಗಳ ಹಿಂದೆ ಕೂಡಾ ಜಗಳ ಮಾಡಿದ್ದ. ಆದರೂ ತಂದೆ ಕುಡಿದು ಬಂದು ಗಲಾಟೆ ಆರಂಭಿಸಿದಾಗ ತನ್ನ ಮನೆ ಎದುರಿನಲ್ಲಿಯೇ ಮಗ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ