ಬೆಂಗಳೂರು: ಆರಗ ಜ್ಞಾನೇಂದ್ರ ಅವರೇ ಗೃಹಸಚಿವರಾಗಿದ್ದು, ಪಿಎಸ್‍ಐ ನೇಮಕಾತಿ ಮರುಪರೀಕ್ಷೆ ನಡೆದರೆ ಜ್ಞಾನೇಂದ್ರರಂತಹ ಅಸಮರ್ಥ, ಅಪ್ರಾಮಾಣಿಕ, ನಿಷ್ಕ್ರಿಯರೇ ಪಿಎಸ್‍ಐಗಳಾಗಿ ನೇಮಕಗೊಂಡರೂ ಆಶ್ಚರ್ಯ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?
ಪಿಎಸ್‍ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ?. ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಿಎಂ ಅವರು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು.
ಪಿಎಸ್‍ಐ ನೇಮಕಾತಿ ಹಗರಣವನ್ನು ನಮ್ಮ ಪಕ್ಷ ಬಯಲಿಗೆಳೆದಾಗ ಬಾಯಿಗೆ ಬಂದಂತೆ ತಲೆಗೊಬ್ಬರಂತೆ ಮಾತನಾಡಿದ್ದ @BJP4Karnataka ನಾಯಕರು ಈಗ ಯಾವ ಬಿಲದಲ್ಲಿ ಅಡಗಿದ್ದಾರೆ? 8/10#PSISCAM
— Siddaramaiah (@siddaramaiah) April 30, 2022
Laxmi News 24×7