ಬೆಂಗಳೂರು: 2022-23ನೇ ಸಾಲಿನಲ್ಲಿ ಮಾಡಲಾಗುವ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಹೊರಡಿಸಿರುವ ಸರಕಾರ, ಆಯಾ ಇಲಾಖಾ ಸಚಿವರಿಗೆ ವರ್ಗಾವಣೆ ಅಧಿಕಾರ ನೀಡಿದೆ.
ಮಾರ್ಗಸೂಚಿ ಪ್ರಕಾರ, ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮಾತ್ರ ವರ್ಗಾವಣೆಗಳನ್ನು ಮಾಡಬಹುದು.
ಈ ಹಿನ್ನೆಲೆಯಲ್ಲಿ 2022-23ನೇ ಸಾಲಿಗೆ ಎ, ಬಿ, ಸಿ ಮತ್ತು ಡಿ ಗ್ರೂಪ್ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜ್ಯೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ನ್ನು ಮೀರದಂತೆ 2022ರ ಮೇ 1ರಿಂದ ಜೂ.15ರ ವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಿದೆ.
ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಶನಿವಾರ ಈ ಆದೇಶ ಹೊರಡಿಸಿದೆ.