ಬೆಂಗಳೂರು: ಇಂದು ಮೇ.1ರ ಕಾರ್ಮಿಕ ದಿನಾಚರಣೆ. ಈ ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿಯೇ, ಕೆ ಎಸ್ ಆರ್ ಟಿ ಸಿ ನೌಕರರಿಗೆ ( KSRTC Employees ) ನಿಗಮವು ಭರ್ಜರಿ ಗಿಫ್ಟ್ ನೀಡಿದೆ. ಅದೇ.. ನಿಗಮದ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ 7200 ನೌಕರರ ಶಿಸ್ತು ಪ್ರಕರಣಗಳನ್ನು ಒಂದು ಬಾರಿಗೆ ಮಾತ್ರ ಅನ್ವಯಿಸುವಂತೆ ಮನ್ನಾ ಮಾಡಲಾಗಿದೆ.
ಹತ್ತು ತಿಂಗಳುಗಳ ಅವಧಿಗಿಂತ ಕಡಿಮೆ ಅವಧಿಯ ಒಳಗಿನ ಗೈರುಹಾಜರಿಯನ್ನು ಮನ್ನಿಸಿ, ಕೂಡಲೇ ಕರ್ತವ್ಯಕ್ಕೆ ಹಾಜರಾಗುವ ನೌಕರರ ವಿಚಾರಣೆಯನ್ನು ರದ್ದುಗೊಳಿಸಿ, ಬಸ್ಸನ್ನು ನೀಡಿ ಚಾಲನೆಗೆ ಅನುವು ಮಾಡಿಕೊಡಲಾಗಿದೆ. ಅದರಂತೆ ಗೈರುಹಾಜರಾಗಿದ್ದ 110 ನೌಕರರು ಕಳೆದ ಮೂರು ದಿನಗಳಿಂದ ಕರ್ತವ್ಯ ಹಾಜರಾಗುವಂತಾಗಿದೆ.