ಕಲಬುರಗಿ: PSI ಪರೀಕ್ಷಾ ಅಕ್ರಮ ಕುರಿತು ಸಿಐಡಿ ತನಿಖೆ ಚುರುಕುಗೊಳಿಸಿದ್ದು, ಬಂಧಿತ ಆರೋಪಿಗಳ ಸಂಖ್ಯೆ 40ರ ಗಡಿ ದಾಟಿದೆ. ಇಂದೂ ಸಹ ಬೆಂಗಳೂರಿನಲ್ಲಿ ಒರ್ವ ಆರೋಪಿಯನ್ನು ಬಂಧಿಸಲಾಗಿದೆ. ಕಲಬುರಗಿಯಲ್ಲಿ ಇನ್ನೊಬ್ಬ ಆರೋಪಿ ತಾನೇ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಇಲ್ಲಿನ ಮತ್ತೊಂದು MSI ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲಾಗಿದೆ. ಈ ಕೇಂದ್ರದಲ್ಲಿ ಒಟ್ಟು 8 ಅಭ್ಯರ್ಥಿಗಳು ಪರೀಕ್ಷೆ ಪಾಸ್ ಮಾಡಿದ್ದರು. ಅವರಲ್ಲಿ ಓರ್ವ ಅಭ್ಯರ್ಥಿ ಪ್ರಭು ಬ್ಲೂಟೂತ್ ಬಳಸಿ ಅಕ್ರಮವಾಗಿ ಪರೀಕ್ಷೆ ಪಾಸ್ ಮಾಡಿದ್ದರು. ನಿನ್ನೆ ಆರೋಪಿ ಪ್ರಭುನೊಂದಿಗೆ ಆತನ ತಂದೆ ಶರಣಪ್ಪನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅಕ್ರಮ ಎಸಗಿದ ಅಭ್ಯರ್ಥಿ ಪ್ರಭು ನನ್ನು ಎಂಎಸ್‌ಐ ಕಾಲೇಜಿನಲ್ಲಿ ಮಹಜರು ನಡೆಸಲಾಗಿದೆ. ಈತ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರು ಬಂದಕೂಡಲೇ ಪೊಲೀಸ್ ಹೇರ್‌ಸ್ಟೈಲ್ ಕಟಿಂಗ್ ಸಹ ಮಾಡಿಸಿಕೊಂಡಿದ್ದ. ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.