Breaking News

P.S.I. ಆಗಬೇಕು ಅಂತ ಮನಿ ಪ್ಲಾಟ್ ಮಾರಿ ರೊಕ್ಕಾ ಕೊಟ್ಟವನ ಮನಿಗೆ ಪೋಲಿಸ್ ಬಂದ ಅರೆಸ್ಟ್ ಮಾಡಿಕೊಂಡ ಹೋಗೋ ಹಾಗ್ ಆಗೆತಿ..

Spread the love

ಕಲಬುರಗಿ: ಮಗ ಪಿಎಸ್‌ಐ ಆಗುತ್ತಾನೆಂದು ತಂದೆ ಮನೆ, ಸೈಟು ಮಾರಿ 50 ಲಕ್ಷ ರೂಪಾಯಿ ಲಂಚ ಕೊಟ್ಟು, ದುಡ್ಡೂ ಇಲ್ಲದೇ, ಕೆಲಸವೂ ಇಲ್ಲದೇ ಗೋಳಾಡುವ ಸ್ಥಿತಿ ಶರಣಪ್ಪ ಎನ್ನುವವರಿಗೆ ಬಂದಿದೆ.

ಮಗ ಪ್ರಭು ಪಿಎಸ್​ಐ ಆಗಲಿ ಎನ್ನುವ ಕಾರಣಕ್ಕೆ ಎಲ್ಲವನ್ನೂ ಮಾರಿ ಇದೀಗ ಬೀದಿಗೆ ಬಂದದ್ದೂ ಅಲ್ಲದೇ, ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ತಂದೆ-ಮಗನನ್ನು ವಶಕ್ಕೆ ಪಡೆಯಲಾಗಿದೆ.

ಆಡಿಟರ್ ಚಂದ್ರಕಾಂತ್ ಕುಲಕರ್ಣಿ ಮುಖಾಂತರ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪಿ ಆರ್​.ಡಿ. ಪಾಟೀಲ್ ಅವರಿಗೆ ಇವರು ಹಣ ನೀಡಿದ್ದರು. ಇರೋ ಮನೆ ಮಾರೊ ಬಾಡಿಗೆ 50 ಲಕ್ಷ ಹಣ ನೀಡಿ ಬಾಡಿಗೆ ಮನೆಯಲ್ಲಿದ್ದರು ಶರಣಪ್ಪ.

ಎಮ್.ಎಸ್.ಇರಾಣಿ ಪದವಿ ಕಾಲೇಜು ಪರೀಕ್ಷೆ ಕೇಂದ್ರದಲ್ಲಿ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆದಿದ್ದ ಆರೋಪದಡಿ ಅಭ್ಯರ್ಥಿ ಪ್ರಭು ಹಾಗೂ ಈತನ ತಂದೆ ಶರಣಪ್ಪ ಅವರಿಂದ 50 ಲಕ್ಷ ರೂಪಾಯಿ ಹಣ ಪಡೆದು ಅಕ್ರಮಕ್ಕೆ ಸಹಕರಿಸಿದ ಆರೋಪದಲ್ಲಿ ಚಂದ್ರಕಾಂತ್ ಕುಲಕರ್ಣಿ ಅವರನ್ನು ಸಿಐಡಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಆರ್.ಡಿ.ಪಾಟೀಲ್ ಸಹಕಾರದಿಂದ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮ ಎಸಗಿರುವ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ