Breaking News

ಪಿಎಸ್‌ಐ ಪರೀಕ್ಷೆ ಅಕ್ರಮ: ಸ್ಫೋಟಕ ಅಂಶ ಬಯಲು ಮಾಡಿದ ಹೆಚ್.ಡಿ.ಕುಮಾರಸ್ವಾಮಿ

Spread the love

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ.

ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು.

ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. ಬಿಜೆಪಿಯ ವಕ್ತಾರರೊಬ್ಬರು ಪೊಲೀಸ್‌ ಆಯುಕ್ತ ಕಮಲ್ ಪಂಥ್ ವಿರುದ್ಧವೇ ಆರೋಪ ಮಾಡಿದ್ದರು. ಆ ಕೊಲೆಯ ವಿಚಾರವಾಗಿ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆಂದು ಅವರು ದೂರಿದ್ದರು. ಪರಸ್ಪರ ದ್ವಿಚಕ್ರ ವಾಹನ ಢಿಕ್ಕಿ ಕಾರಣಕ್ಕೆ ಗಲಾಟೆ ನಡೆದು ಯುವಕನ ಕೊಲೆಯಾಗಿತ್ತು ಎಂದು ಪೊಲೀಸರು ಹೇಳಿದ್ದರು. ಆದರೆ, ಬಿಜೆಪಿ ನಾಯಕರು ಹಠಕ್ಕೆ ಬಿದ್ದವರಂತೆ ಉರ್ದು ಭಾಷೆ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಗಲಾಟೆಯಾಗಿ ಯುವಕನ ಕೊಲೆಯಾಯಿತು ಎಂದು ಕಥೆ ಕಟ್ಟಿದ್ದರು. ಅದು ಅಲ್ಲಿಂದ ಪಿಎಸ್‌ಐ ಪರೀಕ್ಷೆ ಅಕ್ರಮದವರೆಗೂ ಬಂದು ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಪೊಲೀಸ್ ಇಲಾಖೆಯ ಪ್ರಾಮಾಣಿಕ ಅಧಿಕಾರಿ ಕಮಲ್ ಪಂಥ್ ಅವರಿಗೆ ಅವಮಾನ‌ ಮಾಡಿದ್ದರು ಬಿಜೆಪಿ ನಾಯಕರು. ಅದಕ್ಕಾಗಿ ಇಲಾಖೆಯಲ್ಲಿರುವ ಅವರ ಅಭಿಮಾನಿಗಳು ಕೆಲವರು ಸರಕಾರಕ್ಕೆ ಬುದ್ಧಿ ಕಲಿಸಲೆಂದೇ ಅವರೇ ಹಗರಣವನ್ನು ಹೊರತೆಗೆದಿದ್ದಾರೆ. ಇದು ಸರಕಾರದಿಂದ ಹೊರಬಂದಿಲ್ಲ, ಪೊಲೀಸ್ ಇಲಾಖೆಯಿಂದಲೇ ಇದು ಹೊರಬಂದಿದೆ. ಈ ಸರಕಾರದ ನಡವಳಿಕೆಯನ್ನು ಪೊಲೀಸ್‌ ಇಲಾಖೆಯವರೇ ಹೊರಗೆಳೆದಿದ್ದಾರೆ ಎಂದು ಅವರು ಹೇಳಿದರು.

ನಿಷ್ಠಾವಂತ, ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದ್ದ ಬಿಜೆಪಿಯ ನಾಯಕನಿಗೆ ಪರೀಕ್ಷೆ ಅಕ್ರಮದಲ್ಲಿ ಈಗ ಬಂಧನಕ್ಕೊಳಗಾಗಿರುವ ಕಿಂಗ್‌ಪಿನ್ ಲಿಂಕ್ ಇತ್ತು.‌ ಪೊಲೀಸರು ಅದರ ಜಾಡು ಹಿಡಿದು ಎಲ್ಲವನ್ನೂ ಹೊರಗೆಳೆದು ಜನರ ಮುಂದೆ ಇಟ್ಟಿದ್ದಾರೆ. ಹೇಳುತ್ತಾ ಹೋದರೆ ಇದೇ ದೊಡ್ಡ ಕಥೆ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎಲ್ಲಾ ಅಭ್ಯರ್ಥಿಗಳು ದುಡ್ಡು ಕೊಟ್ಟು ಆಯ್ಕೆ ಅಗಿದ್ದಾರೆ ಎನ್ನಲು ಆಗುವುದಿಲ್ಲ. 30% ಆಭ್ಯರ್ಥಿಗಳು ಹಣದಿಂದ ಹುದ್ದೆ ಗಿಟ್ಟಿಸಿರಬಹುದು. ಹಾಗೆಯೇ 30-40% ಆಭ್ಯರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರಬಹುದು, ನ್ಯಾಯಯುತವಾಗಿ ಆಯ್ಕೆಯಾದವರಿಗೆ ಅನ್ಯಾಯ ಆಗಬಾರದು ಎಂದಷ್ಟೇ ನಾನು ಹೇಳಿದ್ದೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ