Breaking News

ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ‌

Spread the love

ಬೆಂಗಳೂರು: ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ‌ ಮುಂದೂಡಲಾಗಿದೆ.

ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ‌.

ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಮೇ 10ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸುವ ಸಾಧ್ಯತೆ ಇದೆ. ಈ ಕಾರಣದಿಂದಾಗಿಯೇ ಸಂಪುಟ ಸಭೆ ಮುಂದೂಡಿರುವ ಸಾಧ್ಯತೆ ಹೆಚ್ಚಾಗಿದೆ ಎಂಬ ಮಾಹಿತಿ ಬಿಜೆಪಿ ಮೂಲಗಳಿಂದ ಲಭ್ಯವಾಗಿದೆ.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ