Breaking News

ಬಾದಾಮಿಯಲ್ಲಿ ಸಿದ್ದು ಸ್ಪರ್ಧೆಗೆ ವಿರೋಧದ ಕೂಗು?

Spread the love

ಬಾಗಲಕೋಟೆ: ಜಿಲ್ಲೆ ಬಿಜೆಪಿಯ ಭದ್ರಕೋಟೆಯಾಗಿದ್ದರೂ ಸದ್ಯ ಆಡಳಿತ ಪಕ್ಷ ಬಿಜೆಪಿಯಲ್ಲಿನ ಅಸಮಾಧಾನ ಬೂದಿ ಮುಚ್ಚಿದ ಕೆಂಡದಂತಿದೆ. ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಜೆಡಿಎಸ್‌ ಹಾಗೂ ಆಮ್‌ ಆದ್ಮಿ ಪಕ್ಷ ಕೂಡ ಈ ಬಾರಿ ಜಿಲ್ಲೆಯ ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕೆಂಬ ತವಕದಲ್ಲಿ ಸಂಘಟನೆಯಲ್ಲಿ ತೊಡಗಿವೆ.

 

ಜಿಲ್ಲೆಯಲ್ಲಿ 7 ವಿಧಾನಸಭೆ ಕ್ಷೇತ್ರಗಳಿದ್ದು, ಅದರಲ್ಲಿ ಬಾದಾಮಿ, ಜಮಖಂಡಿ ಕ್ಷೇತ್ರಗಳು ಕಾಂಗ್ರೆಸ್‌ ಹಿಡಿತದಲ್ಲಿವೆ. ಉಳಿದ 5 ಕ್ಷೇತ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, ಎರಡು ಕ್ಷೇತ್ರ ಪ್ರತಿನಿಧಿಸುವ ಮುಧೋಳದ ಗೋವಿಂದ ಕಾರಜೋಳ, ಬೀಳಗಿಯ ಮುರುಗೇಶ ನಿರಾಣಿ ಸರ್ಕಾರ ದಲ್ಲಿ ಪ್ರಬಲ ಖಾತೆ ಸಚಿವರೂ ಆಗಿದ್ದಾರೆ. ಹಿರಿಯ ರಾಜಕಾರಣಿ ಎಸ್‌.ಆರ್‌.ಪಾಟೀಲ್‌ಗೆ ಕಳೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಟಿಕೆಟ್‌ ತಪ್ಪಿದ್ದೇ ತಡ ಅವರೀಗ ಕಾಂಗ್ರೆಸ್‌ನ ರಾಜ್ಯ ಮಟ್ಟದ ನಾಯಕರಿಂದ ಅಂತರ ಕಾಯ್ದುಕೊಂಡಿದ್ದಾರೆ. ಅದರಲ್ಲೂ ಜಿಲ್ಲೆ ಪ್ರತಿನಿಧಿಸುವ ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆಗಿನ ಅವರ ಸಂಬಂಧ ಕೊಂಚ ಹಳಸಿದೆ ಎಂಬ ಮಾತು ಕೇಳಿ ಬರುತ್ತಿದೆ. ಇನ್ನು ಪ್ರಭಾವಿ ಸಚಿವರಾದ ಗೋವಿಂದ ಕಾರಜೋಳ ಮತ್ತು ಮುರುಗೇಶ ನಿರಾಣಿ ಅವರದೇ ಪ್ರತ್ಯೇಕ ಬೆಂಬಲಿಗರ ಪಡೆ ಇದೆ. ಬಿಜೆಪಿ ಶಾಸಕರಲ್ಲೂ ಎರಡೂ ಗುಂಪುಗಳಿದ್ದು, ಅಸಮಾಧಾನದ ವಿಷಯದಲ್ಲಿ ಕಾಂಗ್ರೆಸ್ಸಿಗೇನೂ ಬಿಜೆಪಿ ಕಮ್ಮಿ ಇಲ್ಲ.

ಬಾಗಲಕೋಟೆಯಲ್ಲಿ 3ನೇ ಶಕ್ತಿ! ಇಲ್ಲಿ ಹಾಲಿ ಶಾಸಕ ವೀರಣ್ಣ ಚರಂತಿ ಮಠ ಮತ್ತು ಕಾಂಗ್ರೆಸ್‌ನ ಮಾಜಿ ಸಚಿವ ಎಚ್‌.ವೈ.ಮೇಟಿ ಅವರಿಬ್ಬರಿಗೂ ಎದುರಾಗಿ ಪ್ರತ್ಯೇಕ ಗುಂಪು ಹುಟ್ಟಿಕೊಂಡಿದೆ. ಇದಕ್ಕೆ ಬಿಜೆಪಿಯ ಯುವ ಧುರೀಣ ಮಲ್ಲಿಕಾರ್ಜುನ ಚರಂತಿಮಠ ನಾಯಕತ್ವ ವಹಿಸಿದ್ದು, ಕ್ಷೇತ್ರದಲ್ಲಿ ತಮ್ಮದೇ ರೀತಿಯ ಸಂಘಟನೆಯಲ್ಲಿ ತೊಡಗಿದ್ದಾರೆ. ಈ ಬಾರಿ ಅವರೂ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬ ಗುಲ್ಲು ಜೋರಾಗಿದೆ.


Spread the love

About Laxminews 24x7

Check Also

ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!

Spread the love ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ