ಬೆಳಗಾವಿ: ಮೈಸೂರು ನಂಜನಗೂಡು ತಾಲೂಕಿನ ಕೌಲಂದೆ ಗ್ರಾಮದಲ್ಲಿ ನೀಚರು, ನಿರ್ಲಜ್ಯರಿಂದ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಅನ್ನ ತಿನ್ನುವ ಇಂತಹವರೆಲ್ಲ ದೇಶ ದ್ರೋಹಿಗಳು. ಪಾಕಿಸ್ತಾನದ ಮೇಲೆ ಪ್ರೀತಿ ಇದ್ರೆ ಅಲ್ಲಿಗೆ ಹೋಗಬೇಕು. ನಾನು ಕೂಡ ಸರ್ಕಾರಕ್ಕೆ ಎಚ್ಚರಿಕೆ ಕೊಡುತ್ತೇನೆ ಎಂದರು.
ಕೂಡಲೇ ಆರೋಪಿಗಳನ್ನು ಬಂಧಿಸಬೇಕು. ಇಲ್ಲವಾದರೆ ಶ್ರೀರಾಮಸೇನೆಯಿಂದ ಮೈಸೂರಿನ ‘ಕೌಲಂದೆ ಚಲೋ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತೇವೆ ಎಂದು ಆಕ್ರೋಶ ಹೊರಹಾಕಿದರು.
Laxmi News 24×7