Breaking News

P.S.I.ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರ: ಭಾಸ್ಕರ್ ರಾವ್

Spread the love

ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣದ ತನಿಖೆಯನ್ನು ಸಿಐಡಿಗೆ ನೀಡಿರುವುದರ ಹಿಂದೆ ಸತ್ಯ ಹೊರಬರುವುದನ್ನು ತಡೆಯುವ ಹುನ್ನಾರವಿದೆ ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದರು.

 

ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರೇ ಆರೋಪಿಗಳಾಗಿರುವ ಹಗರಣವನ್ನು ಬಿಜೆಪಿ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಿಐಡಿಯಿಂದಲೇ ತನಿಖೆ ಮಾಡಿಸುವುದು ಹಾಸ್ಯಾಸ್ಪದ. ಈ ತನಿಖೆಗೆ ಯಾವ ಬೆಲೆಯೂ ಇಲ್ಲ. ಅನುಮಾನಾಸ್ಪದ ಅಭ್ಯರ್ಥಿಯ ತನಿಖೆ ವೇಳೆ ಬಿಜೆಪಿ ನಾಯಕರ ಹೆಸರು ಕೇಳಿಬಂದರೆ, ಆ ಅಭ್ಯರ್ಥಿಯ ವಿಚಾರಣೆಯನ್ನೇ ಕೈಬಿಡಲಾಗುತ್ತಿದೆ. ಇಡೀ ಹಗರಣವನ್ನು ಮುಚ್ಚಿ ಹಾಕಿ, ಬಿಜೆಪಿ ನಾಯಕರನ್ನು ಬಚಾವ್ ಮಾಡಲೆಂದೇ ಸಿಐಡಿ ಮೂಲಕ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ