Breaking News

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

Spread the love

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಪಡಿತರ ನೀಡಲಾಗುವುದು. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಜಿಲ್ಲೆಯ ಅಂತ್ಯೋದಯ(ಎಎವೈ) ಮತ್ತು ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

 

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪ್ರತಿ ಅಂತ್ಯೋದಯ(ಎಎವೈ) ಪಡಿತರ ಚೀಟಿಗೆ 15 ಕೆ.ಜಿ. ಜೋಳ ಮತ್ತು 20 ಕೆ.ಜಿ. ಅಕ್ಕಿ ಹಾಗೂ ಬಿಪಿಎಲ್ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 2 ಕೆ.ಜಿ ಜೋಳ ಮತ್ತು 3 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ.

ಒಪ್ಪಿಗೆ ಅಥವಾ ಸಮ್ಮತಿ ಸೂಚಿಸಿರುವ ಎಪಿಎಲ್ ಪಡಿತರ ಚೀಟಿದಾರರಿಗೆ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ 15 ರೂ.ಗಳಂತೆ ಏಕ ಸದಸ್ಯರ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಹಾಗೂ ಎರಡು ಮತ್ತು ಹೆಚ್ಚಿನ ಕುಟುಂಬ ಸದಸ್ಯರಿರುವ ಎ.ಪಿ.ಎಲ್ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಅಂತರ್ ರಾಜ್ಯ ಅಥವಾ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ