ಬೆಂಗಳೂರು: ಸಾರ್ವತ್ರಿಕ ಚುನಾವಣೆಗೆ ಸಜ್ಜಾಗುತ್ತಿರುವ ಸಂದರ್ಭದಲ್ಲೇ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ವಿರುದ್ಧ ಮಾಡಿರುವ ಗಂಭೀರ ಆರೋಪ ಬಿಜೆಪಿ ಕೇಂದ್ರ ಹಾಗೂ ರಾಜ್ಯ ನಾಯಕತ್ವಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ. ಈ ಬೆಳವಣಿಗೆ ಪದ ರಾಜ್ಯ ಟಕದಲ್ಲಿ ಹಿಡಿತವಿಲ್ಲದ ನಾಯಕತ್ವವನ್ನು ಸಾಬೀತುಪಡಿಸುವ ಜತೆಯಲ್ಲೇ ಆಟಕ್ಕುಂಟು ಲೆಕ್ಕಕ್ಕಿಲ್ಲದಂತಾದ ಉಸ್ತುವಾರಿಯಿಂದ ಸಂಟನೆಯಲ್ಲಿ ಶಿಸ್ತು ದೂರಾಗಿ ಪದ ಕಾರ್ಯಕರ್ತರಿಗೂ ಇರುಸುಮುರಿಸು ಉಂಟು ಮಾಡಿದೆ.
ಪ್ರತಿ ನಿತ್ಯ ಒಂದಿಲ್ಲೊಂದು ಹೇಳಿಕೆಗಳಿಂದಲೇ ಸರ್ಕಾರಕ್ಕೆ ಮುಜುಗರ ಉಂಟುಮಾಡುತ್ತ ಬಂದಿರುವ ಯತ್ನಾಳ್, ರಾಮದುರ್ಗ ತಾಲೂಕಿನಲ್ಲಿ ಜರುಗಿದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ಸಮಾವೇಶದಲ್ಲಿ ಮಾತನಾಡುತ್ತ, ‘ದೆಹಲಿಯಿಂದ ಬಂದ ಕೆಲವು ಲೀಡರ್ಗಳು 2500 ಕೋಟಿ ರೂ. ಕೊಡಿ, ಸಿಎಂ ಮಾಡ್ತೀವಿ ಅಂದಿದ್ರು’ ಎನ್ನುವ ಮೂಲಕ ಪ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಯತ್ನಾಳ್ ಅವರ ಈ ಹೇಳಿಕೆಗೆ ಪಕ್ಷದ ನಾಯಕರು ನಿರುತ್ತರರಾಗಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಮೆತ್ತಿಕೊಂಡಿರುವ ಪರ್ಸೆಂಟೇಜ್, ನೇಮಕಾತಿ ಹಗರಣಗಳ ಕಳಂಕದಿಂದ ಹೊರಬರಲು ಪರದಾಡುತ್ತಿರುವ ಸಂದರ್ಭದಲ್ಲಿಯೇ ಯತ್ನಾಳ್ಅವರ ಈ ಆರೋಪ ನಾಯಕತ್ವಕ್ಕೆ ಕಪುಚುಕ್ಕೆಯನ್ನಿಟ್ಟಿದೆ. ಪ್ರತಿಪಕ್ಷಗಳ ಕೈಗೂ ಅಸ್ತ್ರ ದೊರಕಿಸಿಕೊಟ್ಟಿದೆ.
Laxmi News 24×7