Breaking News

ಅನಾರೋಗ್ಯದಿಂದ ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜಾ ನಿಧನ

Spread the love

ಬೆಂಗಳೂರು: ಅನಾರೋಗ್ಯದಿಂದ ಸ್ಯಾಂಡಲ್ ವುಡ್ ಹಾಸ್ಯನಟ ಮೋಹನ್ ಜುನೇಜಾ ನಿಧನರಾಗಿದ್ದಾರೆ. ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಇಂದು ಶನಿವಾರ ಮೇ 7ರಂದು ವಿಧಿವಶರಾಗಿದ್ದಾರೆ.

 

ಇತ್ತೀಚೆಗೆ ತೆರೆಕಂಡು ಭಾರೀ ಯಶಸ್ಸು ಗಳಿಸಿದ ಕೆಜಿಎಫ್ ಭಾಗ ಒಂದು ಮತ್ತು ಎರಡು ಚಿತ್ರ ಸೇರಿದಂತೆ ನವಗ್ರಹ, ಗಣೇಶನ ಗಲಾಟೆ, ಜೋಗಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸ್ಯಾಂಡಲ್ ವುಡ್ ನ ಪ್ರಮುಖ ನಾಯಕ ನಟರ ಜೊತೆ ಹಾಸ್ಯನಟ ಮೋಹನ್ ತೆರೆ ಹಂಚಿಕೊಂಡಿದ್ದಾರೆ.

ಇವರು ಬೆಂಗಳೂರಿನ ಉತ್ತರ ತಾಲ್ಲೂಕಿನ ತಮ್ಮೇನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಮೃತದೇಹವನ್ನು ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದ್ದು, ಕುಟುಂಬಸ್ಥರು, ಬಂಧುಗಳು, ಕಲಾವಿದರು ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ


Spread the love

About Laxminews 24x7

Check Also

20 ವರ್ಷಗಳಿಂದ ಕಳ್ಳತನ: ಕುಖ್ಯಾತ ಖದೀಮ ಬೆಂಗಳೂರು ಪೊಲೀಸರ ಬಲೆಗೆ

Spread the loveಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ