ಚಿತ್ರದುರ್ಗ: ಹೊಳಲ್ಕೆರೆಯಲ್ಲಿ ವೇಶ್ಯಾವಾಟಿಕೆ (Prostitution) ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಅರೆಸ್ಟ್ (Arrest) ಆಗಿದ್ದಾರೆ. ಹೊರ ರಾಜ್ಯದ ಯುವತಿಯರನ್ನು ಬಳಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಶೌಚಾಲಯ ಗೋಡೆಗೆ ಗೌಪ್ಯ ಬಾಗಿಲು ನಿರ್ಮಿಸಿ ಪ್ರವೇಶಕ್ಕೆ ವ್ಯವಸ್ಥೆ ಮಾಡಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ಅಡ್ಡೆಯ ಕಳ್ಳ ಬಾಗಿಲು ರಹಸ್ಯ ಬಯಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಮಾಹಿತಿ ಮೇರೆಗೆ ಚಿತ್ರದುರ್ಗ ಡಿಸಿಐಬಿ ಇನ್ಸ್ಪೆಕ್ಟರ್ ಕಿರಣ್ ನೇತೃತ್ವದಲ್ಲಿ ದಾಳಿ ನಡೆದಿದೆ.