Breaking News

ಪ್ರಧಾನಿ ನರೇಂದ್ರ ಮೋದಿ ಅವರೇ ಸುಳ್ಳು ಹೇಳುತ್ತಾರೆ ಎಂದರೆ ಏನನ್ನಬೇಕು: ಸಿದ್ದರಾಮಯ್ಯ

Spread the love

ಬೆಳಗಾವಿ: ಕೋವಿಡ್‌-19ನಿಂದ ಸಂಭವಿಸಿರುವ ಸಾವಿನ ಸಂಖ್ಯೆಯ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಸುಳ್ಳು ಹೇಳುತ್ತಾರೆ ಎಂದರೆ ಏನನ್ನಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ‌ ಸಿದ್ದರಾಮಯ್ಯ ಪ್ರಶ್ನಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ದೇಶದಲ್ಲಿ ಕೋವಿಡ್-19ರಿಂದ ಮೃತಪಟ್ಟವರ ನಿಖರ ಸಂಖ್ಯೆಯನ್ನು ಬಹಿರಂಗಪಡಿಸುವುದಕ್ಕಾಗಿ ಮರಣ ಆಡಿಟ್ ನಡೆಸಬೇಕು’ ಎಂದು ಆಗ್ರಹಿಸಿದರು.

‘ಕೋವಿಡ್ ಸಾವಿನ‌ ವಿಷಯದಲ್ಲಿ ಸುಳ್ಳು ಲೆಕ್ಕ ಕೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಬಂಧಿಸಿದವರು ಜನರ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದರು.

‘2020ರ ಜನವರಿಯಿಂದ ಡಿಸೆಂಬರ್‌ವರೆಗೆ ದೇಶದಲ್ಲಿ 47 ಲಕ್ಷ ಜನರು ಕೋವಿಡ್ ಕಾರಣದಿಂದ ಬಲಿಯಾಗಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಹೇಳಿದೆ. ಇದು ಯಾವುದೋ ರಾಜಕೀಯ ಪಕ್ಷ ಕೊಟ್ಟಿರುವ ಮಾಹಿತಿಯಲ್ಲ. ಆದರೆ ಸರ್ಕಾರ ಅದನ್ನು ನಿರಾಕರಿಸಿದೆ. 5.20 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ ಅಂತಷ್ಟೆ ಹೇಳಿದೆ.‌ ಡಬ್ಲ್ಯುಎಚ್‌ಒ ಹೇಳಿದ್ದು ಸುಳ್ಳು ಹೇಗಾಗುತ್ತದೆ?’ ಎಂದು ಕೇಳಿದರು.

‘ಕೋವಿಡ್‌ನಿಂದ ರಾಜ್ಯದಲ್ಲಿ 5 ಲಕ್ಷ ಹಾಗೂ ದೇಶದಲ್ಲಿ 50 ಲಕ್ಷ ಜನರು ಸತ್ತಿದ್ದಾರೆ. ಆದರೆ ಸರ್ಕಾರ ಸುಳ್ಳು ಹೇಳುತ್ತಿದೆ. ಸಿಎಂ, ಪ್ರಧಾನಿಯಿಂದ ಹಿಡಿದು ಸರ್ಕಾರದ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಸತ್ತವರ ಲೆಕ್ಕವನ್ನೆ ಮಾಡಿಲ್ಲ. ಪ್ರಧಾನಿಯೇ ಸುಳ್ಳು ಹೇಳುತ್ತಾರೆ ಎಂದರೆ ಏನನ್ನಬೇಕು?’ ಎಂದು ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ