Breaking News

ನನಗಿನ್ನೂ ಸಿಎಂ ಅವಕಾಶವಿದೆ: ಸಚಿವ ಉಮೇಶ್‌ ಕತ್ತಿ

Spread the love

ಬ್ರಹ್ಮಾವರ: ನನಗಿನ್ನೂ 61 ವರ್ಷ. 75 ವರ್ಷದ ತನಕ ಯುವಕನೇ. ದೇವರ ದಯೆ, ರಾಜ್ಯದ ಜನತೆಯ ಆಶೀರ್ವಾದವಿದ್ದರೆ ನಾನು ಸಿಎಂ ಆಗುತ್ತೇನೆ ಎಂದು ಅರಣ್ಯ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್‌ ವಿ. ಕತ್ತಿ ಹೇಳಿದರು.

 

ಅವರು ನೀಲಾವರದಲ್ಲಿ ಕೀರ್ತಿಶೇಷ ಪೇಜಾವರ ಶ್ರೀಗಳ ಸ್ಮೃತಿ ವನಕ್ಕೆ ಭೂಮಿಪೂಜೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾನು ಸಿಎಂ ಆಗುವ ಅವಸರದಲ್ಲಿಲ್ಲ. ಪದವಿ ಬೇಕು ಎಂದು ಕೇಳುವುದಿಲ್ಲ. ಸಿಎಂ ಆಗಿ ಜವಾಬ್ದಾರಿ ನಿಭಾಯಿಸುವ ಸಾಮರ್ಥ್ಯ ನನಗಿದೆ ಎಂದರು.

ನಾನು ಸೀನಿಯರ್‌ ಎಂಎಲ್‌ಎ. 10 ಚುನಾವಣೆಗಳಲ್ಲಿ ಸ್ಪರ್ಧಿಸಿ 9 ಬಾರಿ ಗೆದ್ದು ಎಂಟು ಅವಧಿಗೆ ಅಧಿಕಾರ ಚಲಾಯಿಸಿದ್ದೇನೆ. ಮುಖ್ಯಮಂತ್ರಿ ಸ್ಥಾನಕ್ಕೆ ಆಸೆ ಪಟ್ಟಿಲ್ಲ. ಅದಾಗಿಯೇ ಬಂದರೆ ನೋಡೋಣ ಎಂದು ಹೇಳಿದರು.


Spread the love

About Laxminews 24x7

Check Also

ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಲ್ಲಿನ ತಾಲೂಕು ಆಡಳಿತಗಳು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ.

Spread the loveಶಿವಮೊಗ್ಗ/ಉತ್ತರಕನ್ನಡ: ರಾಜ್ಯದ ಮಲೆನಾಡು ಭಾಗದ ಹಲವೆಡೆ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಭಾರಿ ವರ್ಷಧಾರೆ ಹಿನ್ನೆಲೆಯಲ್ಲಿ ಶಿವಮೊಗ್ಗ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ