Breaking News

500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

Spread the love

ಬೆಳಗಾವಿ: ಮಸೀದಿಗಳಲ್ಲಿ ಅಜಾನ್ ಶಬ್ದದ ಕಿರಿಕಿರಿ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಇಂದಿನಿಂದ ರಾಜ್ಯಾದ್ಯಂತ ಅಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಸುಪ್ರಭಾತ, ಚಾಲಿಸಾ ಪಠಣ ಹಿನ್ನೆಲೆ ಬೆಳಗಾವಿಯಲ್ಲಿ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಇಂದು ಬೆಳಗ್ಗೆ 5ಕ್ಕೆ ಬೆಳಗಾವಿ ನಗರದ ಆರ್‌ಟಿಓ ವೃತ್ತದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಹನುಮಾನ್ ದೇವರ ಮೂರ್ತಿಗೆ ಆರತಿ ಮಾಡಿ, ಹನುಮಾನ ಚಾಲೀಸಾ ಪಠಣ ಮಾಡಿ ಸ್ಪೀಕರ್ ನಲ್ಲಿ ಭಜನೆ ಹಾಡು ಹಾಕಿದರು.ಹೀಗೆ ಜಿಲ್ಲೆಯ ಹಲವು ದೇವಸ್ಥಾನಗಳಲ್ಲಿ ಭಜನೆ, ಹನುಮಾನ್ ಚಾಲೀಸಾ, ಮಂತ್ರ ಪಠಣ ಇಂದಿನಿಂದ ಪ್ರಾರಂಭಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಳಗಾವಿ ನಗರದ ನೂರು, ಜಿಲ್ಲೆಯ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರಿಂದ ತೀವ್ರ ಭದ್ರತೆ ವಹಿಸಲಾಗಿದೆ.


Spread the love

About Laxminews 24x7

Check Also

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಬಿಜೆಪಿ ಧರ್ಮ ಯುದ್ಧ ನಡೆಸುವುದಾಗಿ ಘೋಷಿಸಿದೆ.

Spread the love ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಮಾಡಲಿದ್ದೇವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ