ಬಾಗಲಕೋಟೆ : ರಾಜ್ಯದಲ್ಲಿ ಅಜಾನ್ ವಿರುದ್ಧ ಪರ್ಯಾಯವಾಗಿ ಶ್ರೀರಾಮಸೇನೆ ಸುಪ್ರಭಾತ ಅಭಿಯಾನ ಹಮ್ಮಿಕೊಂಡಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಮಾಜದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಮೊದಲು ಮುತಾಲಿಕ್ ರಂತವರನ್ನು ಒದ್ದು ಒಳಗೆ ಹಾಕಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ಉಳಿಸೋದು ಕಷ್ಟವಾಗುತ್ತದೆ ಎಂದರು.
ರಾಜ್ಯ ಸರ್ಕಾರ ಇಂತಹ ವಿಷ ಬೀಜಗಳನ್ನು ಕಿತ್ತು ಹಾಕಬೇಕು. ಸರ್ಕಾರ ಮೌನವಾಗಿ ಒಪ್ಪಿಗೆ ಸೂಚಿಸುವುದನ್ನು ಬಿಡಬೇಕು. ಮೊದಲು ಮುತಾಲಿಕ್ ರಂತರನ್ನು ಒದ್ದು ಒಳಗೆ ಹಾಕಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಶಾಂತಿ ಉಳಿಸುವುದು ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.