ಬೆಂಗಳೂರು: ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ದೂಷಣೆಯಿಂದ ತಮ್ಮ ಹಗರಣ ಮುಚ್ಚಿಕೊಳ್ಳಬಹುದು ಎಂದುಕೊಂಡಿದ್ದಾರೆ.
ಆದರೆ, ಬಿಜೆಪಿ ಸರ್ಕಾರದ ಶೇ 40 ಪರ್ಸೆಂಟ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ. ವಾಜಪೇಯಿ ಕ್ರೀಡಾಂಗಣದ ಛಾವಣಿ ಕುಸಿದಿದೆ, ತೇಲು ಸೇತುವೆ ತೇಲಿಹೋಗಿದೆ. ಇದು ಶೇ 40 ಪರ್ಸೆಂಟ್ ಪ್ರಭಾವವಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದೆ.
‘ಮೊನ್ನೆಯಷ್ಟೇ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೊಬ್ಬರು ‘ಟಿಕೆಟ್‌ಗಾಗಿ ಸೀರೆ, ಪಂಚೆ ಹಿಡಿದು ಬರಬೇಡಿ’ ಎಂದು ತಮ್ಮ ಪಕ್ಷದವರಿಗೆ ಹೇಳಿದ್ದರು. ಹಿಡಿದು ಬರಬೇಕಿರುವುದು ‘ಸೂಟ್ ಕೇಸ್’ ಎಂಬುದನ್ನು ಯತ್ನಾಳ್ ಅವರು ತಿಳಿಸಿದ್ದಾರೆ. ಟಿಕೆಟ್‌ಗಾದರೂ ಸರಿ, ಮಂತ್ರಿಗಿರಿ, ಸಿಎಂ ಹುದ್ದೆಗದರೂ ಸರಿ ಬಿಜೆಪಿಯಲ್ಲಿ ‘ಸೂಟ್ ಕೇಸ್’ ಮುಖ್ಯ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
Laxmi News 24×7