Breaking News

ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಪತ್ನಿ ಆತ್ಮಹತ್ಯೆ

Spread the love

ಚೆನ್ನೈ: ತನ್ನ ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದಿರುವುದಕ್ಕೆ ಮನನೊಂದ 27 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ.

ಕಡಲೂರು ಜಿಲ್ಲೆಯ ಅರಿಸಿಪೆರಿಯಂಕುಪ್ಪಂ ಗ್ರಾಮದ ರಮ್ಯಾ ಆತ್ಮಹತ್ಯೆ ಶರಣಾದ ಗೃಹಿಣಿ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರಮ್ಯಾ ಏಪ್ರಿಲ್ 6 ರಂದು ಕಾರ್ತಿಕೇಯನ್ ಎಂಬವರನ್ನು ವಿವಾಹವಾಗಿದ್ದರು.

ಮೂಲಗಳ ಪ್ರಕಾರ, ರಮ್ಯಾ ತನ್ನ ಗಂಡನ ಮನೆಯಲ್ಲಿ ಶೌಚಾಲಯವಿಲ್ಲದ ಕಾರಣ ಮದುವೆಯ ನಂತರ ತನ್ನ ತಾಯಿಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದಳು. ಇದೇ ವೇಳೆ ರಾಜ್ಯದ ರಾಜಧಾನಿಗೆ ದೂರವಿರುವ ಕಡಲೂರು ನಗರದಲ್ಲಿ ಶೌಚಾಲಯವಿರುವ ಮನೆಯನ್ನು ಹುಡುಕುವಂತೆ ಪತಿಯನ್ನು ಕೇಳಿಕೊಂಡಿದ್ದರು. ಇದು ಅವರ ನಡುವೆ ವಿವಾದಕ್ಕೆ ಕಾರಣವಾಗಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ