Breaking News

ಶೀಘ್ರವೇ ಬಿಬಿಎಂಪಿ ಚುನಾವಣೆ: ಸುಪ್ರೀಂನಿಂದ ಮಹತ್ವದ ತೀರ್ಪು

Spread the love

ನವದೆಹಲಿ/ ಬೆಂಗಳೂರು: ಮಧ್ಯಪ್ರದೇಶ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಿಂದ ಶೀಘ್ರವೇ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಮಧ್ಯಪ್ರದೇಶದಲ್ಲಿ  ನಾನಾ ಕಾರಣಗಳಿಂದಾಗಿ ಕಳೆದ 2 ವರ್ಷಗಳಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿರಲಿಲ್ಲ. ಈ ಬಗ್ಗೆ ಸಲ್ಲಿಕೆಯಾಗಿದ್ದ ಪಿಐಎಲ್‌ ವಿಚಾರಣೆ ನಡೆಸಿದ ಕೋರ್ಟ್‌ ಮಧ್ಯಪ್ರದೇಶದ 23 ಸಾವಿರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರವೇ ಚುನಾವಣೆ ನಡೆಸಬೇಕು ಎಂದು ಮಹತ್ವದ ತೀರ್ಪು ನೀಡಿದೆ.

ಈ ತೀರ್ಪು ಬೇರೆ ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಬಾಕಿ ಉಳಿದಿರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಅನ್ವಯ ಎಂದು ತನ್ನ ಆದೇಶದಲ್ಲಿ ತಿಳಿಸಿದ ಹಿನ್ನೆಲೆಯಲ್ಲಿ ಶೀಘ್ರವೇ ಬಿಬಿಎಂಪಿಯ 198 ವಾರ್ಡ್‌ಗಳಿಗೆ ಚುನಾವಣೆ ನಡೆಯುವ ಸಾಧ್ಯತೆಯಿದೆ


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ