Breaking News

ಸಿಎಂ ಜೊತೆಗಿನ ಚರ್ಚೆ ಮುಗಿಯುತ್ತಿದ್ದಂತೇ ಊಟಕ್ಕಾಗಿ ಮುಗಿಬಿದ್ದ ಶಾಲಾ ಶಿಕ್ಷಕರು!. ವಿಡಿಯೋ ವೈರಲ್‌

Spread the love

ಪಂಜಾಬ್‌: ಶಾಲಾ ಶಿಕ್ಷಕರು ಊಟಕ್ಕಾಗಿ ಮುಗಿಬಿದ್ದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಶಾಲಾ ಶಿಕ್ಷಣದ ಮಿತಿಯನ್ನು ಹೆಚ್ಚಿಸುವ ಸಂಬಂಧ ಪಂಜಾಬ್‌ ಸಿಎಂ ಭಗವಂತ್ ಮಾನ್ ಅವರು ರೆಸಾರ್ಟ್‌ವೊಂದರಲ್ಲಿ ಶಾಲಾ ಶಿಕ್ಷಕರು ಮತ್ತು ಪ್ರಾಂಶುಪಾಲರನ್ನು ಭೇಟಿ ಮಾಡಿದರು.

ಚರ್ಚೆಯ ನಂತರ ಅಲ್ಲಿ ಏರ್ಪಡಿಸಲಾಗಿದ್ದ ಉಚಿತ ಊಟಕ್ಕೆ ಶಿಕ್ಷಕರು ತಟ್ಟೆ ಹಿಡಿದು ಮುಗಿಬಿದ್ದಿದ್ದಾರೆ. ಮಂಗಳವಾರ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಲಾ ಶಿಕ್ಷಣದ ಮಿತಿಯನ್ನು ಹೆಚ್ಚಿಸಲು ಸಿಎಂ ಭಗವಂತ್ ಮಾನ್ ಸರ್ಕಾರಿ ಶಾಲಾ ಮುಖ್ಯಸ್ಥರು ಮತ್ತು ಶಿಕ್ಷಕರ ಸಭೆಯನ್ನು ಕರೆದಿದ್ದರು. ಆದರೆ ಸಭೆ ಮುಗಿದ ತಕ್ಷಣ ಶಿಕ್ಷಕರು ಊಟದ ಕೋಣೆಗೆ ತೆರಳಿ ತಟ್ಟೆಗಳನ್ನು ಪಡೆಯಲು ಒಬ್ಬರಮೇಲೊಬ್ಬರು ನೂಕಾಡಿದ್ದಾರೆ.

ವೀಡಿಯೋ ನೋಡಿದ ನೆಟ್ಟಿಗರು ತಮಾಷೆಯ ಕಾಮೆಂಟ್‌ಗಳನ್ನು ಮಾಡಿದ್ದಾರೆ.


Spread the love

About Laxminews 24x7

Check Also

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

Spread the loveಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ