Breaking News

ಕರ್ನಾಟಕದ ನಾಲ್ಕು ‘ರಾಜ್ಯಸಭಾ ಸ್ಥಾನ’ಗಳಿಗೆ ಚುನಾವಣೆ ಘೋಷಣೆ: ಜೂ.10ರಂದು ಮತದಾನ, ಅಂದೇ ಫಲಿತಾಂಶ |

Spread the love

ನವದೆಹಲಿ: ದಿನಾಂಕ 30-06-2022ರಂದು ನಿವೃತ್ತಿಯಾಗಲಿರುವಂತ ಕರ್ನಾಟಕದಿಂದ ರಾಜ್ಯಸಭೆಗೆ ( Rajya Sabha ) ಆಯ್ಕೆಯಾಗಿದ್ದಂತ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ 15 ರಾಜ್ಯಗಳ 57 ರಾಜ್ಯ ಸಭಾ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಚುನಾವಣೆ ಘೋಷಣೆ ಮಾಡಲಾಗಿದೆ.

ಈ ಸಂಬಂಧ ಚುನಾವಣಾ ಆಯೋಗ ( Election Commission of India – ECI) ಆದೇಶ ಹೊರಡಿಸಿದ್ದು, ದಿನಾಂಕ 30-06-2022ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಂತ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, ನಿರ್ಮಲಾ ಸೀತಾರಾಮನ್ ಅವರು ನಿವೃತ್ತಿ ಹೊಂದಲಿದ್ದಾರೆ. ಈ ಸ್ಥಾನಗಳಿಗೆ ದಿನಾಂಕ 10-06-2022ರಂದು ಚುನಾವಣೆ ನಿಗದಿಗೊಳಿಸಲಾಗಿದೆ.ದಿನಾಂಕ 24-05-2022ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದೆ. ದಿನಾಂಕ 31-05-2022ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ದಿನಾಂಕ 01-06-2022ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ದಿನಾಂಕ 03-06-2022ರಂದು ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ