Breaking News

ಬಿ.ಜೆ.ಪುಟ್ಟಸ್ವಾಮಿ ಪೀಠಾರೋಹಣಕ್ಕೆ ಕೋರ್ಟ್ ಬ್ರೇಕ್

Spread the love

ಬೆಂಗಳೂರು, ಮೇ 13. ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ.

 

ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಆದೇಶಿಸಿದೆ.

ಎನ್. ರಾಜು, ರಂಗಸ್ವಾಮಿ, ಎಂ.ಪಿ. ಹೇಮಾವತಿ, ಟಿ.ಎಂ.ಸಿ ಯತೀಶ್ ಕುಮಾರ ಹಾಗೂ ಗೋವಿಂದರಾಜು ಮತ್ತಿತರರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಮಾಡಿದೆ.

ಬಿ.ಜೆ. ಪುಟ್ಟಸ್ವಾಮಿ ಅವರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಧಿರೋಹಣ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ, ಜೂ.13ಕ್ಕೆ ವಿಚಾರಣೆ ಮುಂದೂಡಿದೆ.

ಅಲ್ಲದೆ, ಬಿ.ಜೆ.ಪುಟ್ಟಸ್ವಾಮಿ, ಅಖಿಲ ಕರ್ನಾಟಕ ಗಾಣಿಗ ಸಂಘದ ಆಡಳಿತಾಧಿಕಾರಿ ಎಂ.ಪಿ ಮಂಜುನಾಥ್ ಸೇರಿದಂತೆ ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್‌ನ 10 ಮಂದಿ ಟ್ರಸ್ಟಿಗಳು ಮತ್ತು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ನ್ಯಾಯಾಲಯ ತುರ್ತು ನೋಟಿಸ್ ಜಾರಿ ಮಾಡಿದೆ.

ಅರ್ಜಿದಾರರ ಪರ ವಕೀಲರು, ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್ ರಚನೆಯೇ ಕಾನೂನು ಬಾಹಿರವಾಗಿದೆ. ಹಾಗಾಗಿ, ಟ್ರಸ್ಟ್ ಚಟುವಟಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು. ಇದೇ 15ರಂದು ಬಿ.ಜೆ.ಪುಟ್ಟಸ್ವಾಮಿ ಅವರು ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ