ದಾವಣಗೆರೆ: ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗಳಲ್ಲಿ ಕೆಲಸ ಮಾಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
ದಾವಣಗೆರೆಯಲ್ಲಿ ರಾಜ್ಯಮಟ್ಟದ ಗ್ರಾಮಲೆಕ್ಕಾಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಯಲ್ಲಿ ಕೆಲಸ ಮಾಡುವ ಬಗ್ಗೆ ಒಂದು ವಾರದಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಕಾರ್ಯನಿರ್ವಹಣಾಧಿಕಾರಿ ಎಂದು ಹುದ್ದೆಯ ಹೆಸರು ಬದಲಾವಣೆ ಮಾಡಲು ಬೇಡಿಕೆಯಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
Laxmi News 24×7