Breaking News

ಅಪಘಾತದಲ್ಲಿ ಜೀವಕಳೆದುಕೊಂಡ ದಂತಕಥೆ ಸೈಮಂಡ್ಸ್‌

Spread the love

ಆಸ್ಟ್ರೇಲಿಯಾ: ಕ್ರಿಕೆಟ್‌ ಲೋಕದ ದಂತಥೆ ಎಂದೇ ಬಿಂಬಿತವಾಗಿದ್ದ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಆಟಗಾರ ಆಂಡ್ರ್ಯೋ ಸೈಮಂಡ್ಸ್ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇವರಿಗೆ 46 ವರ್ಷ ವಯಸ್ಸಾಗಿತ್ತು. ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ ಟೌನ್ಸ್‌ವಿಲ್ಲೆ ಬಳಿ ಈ ಅಪಘಾತ ನಡೆದಿದೆ.

 

ಆಸ್ಟ್ರೇಲಿಯಾ ಕ್ರಿಕೆಟ್ ಕಂಡ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾಗಿದ್ದ ಸೈಮಂಡ್ಸ್ 26 ಟೆಸ್ಟ್, 198 ಏಕದಿನ ಹಾಗೂ 14 ಟಿ20 ಪಂದ್ಯಗಳಲ್ಲಿ ರಾಷ್ಟ್ರೀಯ ತಂಡವನ್ನು ಪ್ರತಿನಿಧಿಸಿದ್ದಾರೆ. ಕ್ವೀನ್ಸ್‌ಲ್ಯಾಂಡ್ ಪೊಲೀಸರು ಶನಿವಾರ ಸಂಜೆ ನಗರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಹರ್ವೆ ರೇಂಜ್‌ನಲ್ಲಿ ಅಪಘಾತದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ದೃಢಪಡಿಸಿದ್ದಾರೆ


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ