ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರ ಪುಟ್ಟ ಮೊಮ್ಮಗಳು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಿ.ಟಿ. ದೇವೇಗೌಡರ ಮಗ ಜಿ.ಡಿ. ಹರೀಶ್ ಗೌಡ ಅವರ ಮಗಳು 3 ವರ್ಷದ ಗೌರಿ ಮೃತ ಕಂದಮ್ಮ. ಎಲ್ಲ ಮಕ್ಕಳೊಂದಿಗೆ ಆಟವಾಡುತ್ತಾ, ಖುಷಿ ಖುಷಿಯಿಂದ ಮನೆತುಂಬಾ ಪುಟ್ಟಪುಟ್ಟ ಹೆಜ್ಜೆಯಿಟ್ಟು ಓಡಾಡುತ್ತಿದ್ದ ಪುಟಾಣಿ ಗೌರಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಳು.
ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಡರಾತ್ರಿ ಕೊನೆಯುಸಿರೆಳೆದಿದ್ದಾಳೆ. ಮಗುವನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
Laxmi News 24×7