ಬೆಂಗಳೂರು : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ವಿದ್ಯಾರ್ಥಿಗಳ ಬಸ್ ಪಾಸ್ ನ ಅವಧಿಯನ್ನು ಜೂ. 30 ರವರೆಗೆ ವಿಸ್ತರಣೆ ಮಾಡಿವೆ.

ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 16-05-2022ರಿಂದ 2022-23ನೇ ಸಾಲಿನ ಭೌತಿಕ ತರಗತಿಗಳು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಆರಂಭಗೊಳ್ಳುತ್ತಿವೆ. ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಿ, ಬಸ್ ಪಾಸ್ ( Bus Pass ) ಪಡೆಯಲು ಅವಕಾಶ ಕೂಡ ಕಲ್ಪಿಸಲಾಗಿದೆ.
ಈ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ, 2021-22ನೇ ಸಾಲಿನಲ್ಲಿ ಪೆಡಿದುರಂವತ ವಿದ್ಯಾರ್ಥಿ ಬಸ್ ಪಾಸ್ ( Student Bus Pass ) ಬಳಸಿ, ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಸಂಚರಿಸಲು ಅನುಮತಿಸಿದೆ. ಈ ಹಿಂದೆ ನೀಡಿರುವಂತ ಬಸ್ ಪಾಸ್ ಮಾನ್ಯತೆ ಜೂನ್ 30, 2022ರವರೆಗೆ ಇರುವುದರಿಂದ, ಇದೇ ಪಾಸುಗಳನ್ನು ಬಳಸಿ ಕೆ ಎಸ್ ಆರ್ ಟಿ ಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಹೇಳಿದೆ.
Laxmi News 24×7