Breaking News

ಸೋಮವಾರ ಶಾಲೆ ಆರಂಭ, ಸಿಹಿಯೊಂದಿಗೆ ಮಕ್ಕಳಿಗೆ ಸ್ವಾಗತ

Spread the love

ಬೆಂಗಳೂರು,ಮೇ 15: ಕೋವಿಡ್‌ನಿಂದಾಗಿ ಕಳೆದ ಎರಡೂವರೆ ವರ್ಷಗಳಲ್ಲಿ ಶಾಲೆಗಳಲ್ಲಿ ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಬಹಳ ಹಿಂದೆ ಉಳಿದಿದ್ದಾರೆ. ಇದರಿಂದಾಗಿ 2022-23 ನೇ ಶೈಕ್ಷಣಿಕ ವರ್ಷವನ್ನು ಮೇ 16ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಅದರಂತೆ ಮೇ 16ರ ಸೋಮವಾರ ಕಲಿಕಾ ಚೇತರಿಕೆ ಕಾರ್ಯಕ್ರಮ ಆರಂಭವಾಗಲಿದ್ದು ಮಕ್ಕಳನ್ನು ಬಹಳ ಸಂತೋಷದಿಂದ ಬರಮಾಡಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಸಿಹಿ ಖಾದ್ಯವನ್ನು ನೀಡಲು ಶಿಕ್ಷಣ ಇಲಾಖೆ ಸೂಚಿಸಿದೆ.

ಮಕ್ಕಳು ಶಾಲೆಗೆ ಬರುವುದು ಸಂಭ್ರಮದ ಕ್ಷಣ. ಮೊದಲ ಸಲವಂತು ಶಾಲೆಗೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆ ದೇವಸ್ಥಾನ. ವಿದ್ಯಾಮಂದಿರಕ್ಕೆ ಕಾಲಿಡುವಾಗ ಸುಂದರವಾದ ಪರಿಸರ ನಿರ್ಮಾಣವಾಗಬೇಕು. ಮಕ್ಕಳು ಶಾಲೆಗೆ ಬರುವಾಗ ಸಂತೋಷದಿಂದ ಬರಬೇಕು.

ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಸಿಹಿಯನ್ನು ಹಂಚಬೇಕು ಎಂದು ಅಗತ್ಯ ವ್ಯವಸ್ಥೆ ಮಾಡಲಾಗಿದೆ.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ