ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಹಾಗೂ ಬಿಜೆಪಿ ನಡವಳಿಕೆ ಬಗ್ಗೆ ಆರ್‌ಎಸ್‌ಎಸ್ ಗರಂ ಆಗಿದೆ. ಶನಿವಾರ ರಾತ್ರಿ ಮೂರು ಗಂಟೆಗಳ ಕಾಲ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ಕಿಡಿಕಾರಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನೂ ಆರ್‌ಎಸ್‌ಎಸ್ ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಹೊರಗಿಟ್ಟು ಸಭೆ ನಡೆಸಲು ಆರ್‌ಎಸ್‌ಎಸ್ ಮುಂದಾಗಿತ್ತು. ಬಿಜೆಪಿ ಹೈಕಮಾಂಡ್ ನಾಯಕರೊಬ್ಬರ ಮನವಿ ಬಳಿಕ ಸಭೆಯಲ್ಲಿ ಪಾಲ್ಗೊಳ್ಳಲು ಒಪ್ಪಿಕೊಂಡಿತು.
ಸಭೆ ಆರಂಭವಾಗುತ್ತಿದ್ದಂತೆ ಆರ್‌ಎಸ್‌ಎಸ್ ಮುಖಂಡರೊಬ್ಬರು ಗರಂ ಆದರು. ನಾವು ನಿಮ್ಮನ್ನು ಬಿಟ್ಟು ಸಭೆ ಮಾಡಬೇಕೆಂದು ತೀರ್ಮಾನ ಮಾಡಿದ್ದೆವು. ಆದರೆ ಜನತೆಗೆ ತಪ್ಪು ಸಂದೇಶ ಹೋಗುತ್ತೆ ಅಂತಾ ರಾಷ್ಟ್ರೀಯ ನಾಯಕರೊಬ್ಬರು ಮನವಿ ಮಾಡಿಕೊಂಡರು. ಅದಕ್ಕಾಗಿ ನಿಮ್ಮ ನಾಲ್ವರನ್ನು ಸಭೆಗೆ ಆಹ್ವಾನಿಸಿದ್ದು ಎಂದು ಆರಂಭದಲ್ಲೇ ತರಾಟೆಗೆ ತೆಗೆದುಕೊಂಡರು.
Laxmi News 24×7