Breaking News

ಜೈಲಿನಿಂದ ಹೊರ ಬರುತ್ತಲೇ ಅದ್ದೂರಿ ಸಮಾರಂಭ ಏರ್ಪಡಿಸಲು ಸೂಚಿಸಿದ್ದ ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಕಿಂಗ್ ಪಿನ್…!

Spread the love

ಪಿಎಸ್‌ಐ ನೇಮಕ ಪರೀಕ್ಷೆ ಅಕ್ರಮದ ಆರೋಪಿಗಳ ಪೈಕಿ ಈಗಾಗಲೇ ಬಹುತೇಕರು ಕಂಬಿ ಹಿಂದಿದ್ದಾರೆ. ಪೊಲೀಸರ ತನಿಖೆಯ ದಿಕ್ಕು ತಪ್ಪಿಸಲು ಪ್ರಕರಣದ ಪ್ರಮುಖ ಆರೋಪಿಗಳಾದ ದಿವ್ಯ ಹಾಗರಗಿ ಹಾಗೂ ಮಂಜುನಾಥ್ ತಮ್ಮ ಮೊಬೈಲ್ ಗಳನ್ನು ನಾಶಪಡಿಸಿದ್ದ ಸಂಗತಿ ಈ ಹಿಂದೆ ಬಯಲಾಗಿತ್ತು.

 

ಇದೀಗ ಈ ಪ್ರಕರಣದ ‘ಕಿಂಗ್ ಪಿನ್’ ಆರ್.ಡಿ. ಪಾಟೀಲ್ ಅಲಿಯಾಸ್ ರುದ್ರಗೌಡನ ಕುರಿತ ಸ್ವಾರಸ್ಯಕರ ಸಂಗತಿಯೊಂದು ಬಹಿರಂಗವಾಗಿದೆ. ರುದ್ರಗೌಡ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವ ಇರಾದೆ ಹೊಂದಿದ್ದು, ಇದಕ್ಕಾಗಿ ಜೈಲಿನಲ್ಲಿ ಕುಳಿತೇ ತಯಾರಿ ನಡೆಸಿದ್ದನೆಂದು ಹೇಳಲಾಗಿದೆ.

ಒಂದೆರಡು ದಿನಗಳಲ್ಲಿ ತನಗೆ ಜಾಮೀನು ಸಿಗಬಹುದೆಂಬ ವಿಶ್ವಾಸ ಹೊಂದಿದ್ದ ರುದ್ರಗೌಡ, ಜೈಲಿನಿಂದ ಹೊರ ಬರುತ್ತಲೇ ತನಗಾಗಿ ಅದ್ದೂರಿ ಸನ್ಮಾನ ಸಮಾರಂಭವೊಂದನ್ನು ಅಫಜಲಪುರದಲ್ಲಿ ಏರ್ಪಡಿಸುವಂತೆ ತನ್ನ ಬೆಂಬಲಿಗರಿಗೆ ಸೂಚನೆ ನೀಡಿದ್ದನೆಂದು ಹೇಳಲಾಗಿದೆ. ಈ ಮೂಲಕ ತನ್ನ ರಾಜಕೀಯ ಶಕ್ತಿ ಪ್ರದರ್ಶಿಸುವ ಚಿಂತನೆ ನಡೆಸಿದ್ದ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ